Good News For Women: ಕಾಂಗ್ರೆಸ್ ಸರ್ಕಾರವು ಮಹಿಳಾ ಸಬಲೀಕರಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿ ತಂದಿವೆ. ಈಗಾಗಲೇ ರಾಜ್ಯ ಸರ್ಕಾರ ಅನೇಕ ಜನಪರ ಹಾಗು ಸಾಮಾಜಿಕ ಭದ್ರತೆಯ ಯೋಜನೆಗಳನ್ನು ಆರಂಭಿಸಿದ್ದು, ಕೌಶಲ್ಯ ವೃದ್ಧಿ ಹಾಗೂ ಉದ್ಯಮಶೀಲತೆಯ ಗುಣಮಟ್ಟ ಹೆಚ್ಚಿಸುವ ಗುರಿಯೊಂದಿಗೆ ಯೋಜನೆಯನ್ನು ಆರಂಭಿಸಿದೆ. ಇದೀಗ ರಾಜ್ಯ ಸರ್ಕಾರವು ಮಹಿಳೆಯರಿಗೆ ಮತ್ತೊಂದು ಸಿಹಿಸುದ್ದಿ (Good News For Women)ನೀಡಿದ್ದು, ಸ್ತ್ರೀಶಕ್ತಿ ಸಂಘಟನೆಗಳಿಗೆ 2 ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ ಸೌಲಭ್ಯ ಒದಗಿಸಲು ಚಿಂತನೆ ನಡೆಸಿದೆ.
ಹೌದು, ಈ ಕುರಿತಾಗಿ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ರಾಜ್ಯ ಸರ್ಕಾರವು ಮಹಿಳಾ ಕಲ್ಯಾಣ ಕಾರ್ಯಕ್ರಮಗಳಿಗೆ 70,427 ಕೋಟಿ ಹಣವನ್ನು ಮೀಸಲಿರಿಸಿದೆ. ರಾಜ್ಯದ ಒಟ್ಟು 1 ಲಕ್ಷದ 65 ಸಾವಿರ ಸ್ತ್ರೀ ಶಕ್ತಿ ಗುಂಪುಗಳಿಗೆ ತಲಾ 25 ಸಾವಿರ ರೂ. ಆವರ್ತ ನಿಧಿ, ಸ್ತ್ರೀ ಶಕ್ತಿ ಸಂಘಟನೆಗಳಿಗೆ 2 ಲಕ್ಷ ರೂ.ವರೆಗೆ ಬಡ್ಡಿ ರಹಿತ ಸಾಲ ಸೌಲಭ್ಯ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕಾರ್ ತಿಳಿಸಿದ್ದಾರೆ.
ಲಕ್ಷ್ಮೀ ಹೆಬ್ಬಾಳ್ಕಾರ್ ಅವರು, ಮಹಿಳೆಯರ ಸ್ವಾವಲಂಬಿ ಬದುಕಿಗೆ ನಮ್ಮ ಸರ್ಕಾರವು ಬೆಂಬಲವಾಗಿ ನಿಂತಿದ್ದು, ಸ್ತ್ರೀಶಕ್ತಿ ಸಂಘಗಳ ಮೂಲಕ ನೆರವು ಪಡೆದ ಮಹಿಳೆಯರು ಗುಡಿ ಕೈಗಾರಿಕೆ, ಕಸೂತಿ, ಚಿಕ್ಕಪುಟ್ಟ ವ್ಯಾಪಾರ ವಹಿವಾಟು ಸೇರಿದಂತೆ ಆದಾಯ ಬರುವ ವೃತ್ತಿಯಲ್ಲಿ ತೊಡಗಿಸಿಕೊಂಡು ಕೌಟುಂಬಿಕ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ. ಅದಲ್ಲದೆ ನಮ್ಮ ಸರ್ಕಾರವು ಮಹಿಳಾ ಸಬಲೀಕರಣಕ್ಕೆ ಬದ್ಧವಾಗಿದ್ದು, ಮಹಿಳೆಯರ ಏಳಿಗೆಗಾಗಿ ಹಗಲಿರುಳು ಶ್ರಮಿಸುತ್ತಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಈ ಯೋಜನೆಯಡಿ ಖಾತೆ ತೆರೆದವರಿಗೆ ಸಖತ್ ಗುಡ್ ನ್ಯೂಸ್ – ಸದ್ಯದಲ್ಲೇ ಜಮಾ ಆಗುತ್ತೆ 10,000 !!
