Home » Job Search: BEL ಕಂಪನಿಯಲ್ಲಿ ಭರ್ಜರಿ ಉದ್ಯೋಗಾವಕಾಶ! ಸಂದರ್ಶನದಲ್ಲಿ ಈ ಕೂಡಲೇ ಭಾಗವಹಿಸಿ, ಸಾವಿರ ಸಾವಿರ ಸಂಬಳ ಎಣಿಸಿ!!!

Job Search: BEL ಕಂಪನಿಯಲ್ಲಿ ಭರ್ಜರಿ ಉದ್ಯೋಗಾವಕಾಶ! ಸಂದರ್ಶನದಲ್ಲಿ ಈ ಕೂಡಲೇ ಭಾಗವಹಿಸಿ, ಸಾವಿರ ಸಾವಿರ ಸಂಬಳ ಎಣಿಸಿ!!!

2 comments

BEL Recruitment 2023: ಉದ್ಯೋಗಾಂಕ್ಷಿಗಳೇ ಗಮನಿಸಿ, ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್(Bharat Electronics Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಮಾಡಲಾಗಿದ್ದು, ಖಾಲಿಯಿರುವ ಮ್ಯಾನೇಜ್ಮೆಂಟ್ ಇಂಡಸ್ಟ್ರಿಯನ್ ಟ್ರೈನಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನದ ಮೊದಲೇ ಅರ್ಜಿ ಸಲ್ಲಿಸುವುದು ಉತ್ತಮ.

ಹುದ್ದೆಯ ವಿವರ ಹೀಗಿದೆ:
ಸಂಸ್ಥೆ – ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್
ಹುದ್ದೆ – ಮ್ಯಾನೇಜ್ಮೆಂಟ್ ಇಂಡಸ್ಟ್ರಿಯನ್ ಟ್ರೈನಿ
ವೇತನ ಮಾಸಿಕ – ₹ 18,000-20,000
ಉದ್ಯೋಗದ ಸ್ಥಳ – ಬೆಂಗಳೂರು

# ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಅನುಸಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸಿಎ ಇಂಟರ್ ಅಥವಾ ICWA ಇಂಟರ್ ಮುಗಿಸಿರಬೇಕು.
# ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಅನುಸಾರ, ಅಭ್ಯರ್ಥಿಗಳ ವಯೋಮಿತಿ ಅಕ್ಟೋಬರ್ 30, 2023ಕ್ಕೆ ಗರಿಷ್ಠ 25 ವರ್ಷ ಮೀರಿರಬಾರದು.

# ಇದರ ಜೊತೆಗೆ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆಯಿರಲಿದೆ.
# SC/ST ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇರಲಿದ್ದು, PWD ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.

# ಈ ಹುದ್ದೆಗೆ ಅರ್ಹ ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಅಕ್ಟೋಬರ್ 30, 2023 ಬೆಳಗ್ಗೆ 10 ಗಂಟೆಗೆ ಸಂದರ್ಶನ ನಡೆಯಲಿದೆ.
ಸಂದರ್ಶನ ನಡೆಯುವ ಸ್ಥಳದ ವಿವರ:
ಕಲಿಕೆ ಮತ್ತು ಅಭಿವೃದ್ಧಿ ಕೇಂದ್ರ
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್
ಜಾಲಹಳ್ಳಿ
ಬೆಂಗಳೂರು-560090
# ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ₹ 18,000-20,000 ಇರಲಿದೆ.

 

ಇದನ್ನು ಓದಿ: Bantwala: ಯಕ್ಷಗಾನದ ವೇಷಭೂಷಣ ತೊಟ್ಟು ರಸ್ತೆಯಲ್ಲಿ ನಿಂತ ವ್ಯಕ್ತಿಗೆ ಹಿರಿಯ ಕಲಾವಿದರೊಬ್ಬರಿಂದ ತರಾಟೆ!!

You may also like

Leave a Comment