Home » Ram Mandir: ಅಯೋಧ್ಯಾ ರಾಮ ಮಂದಿರ ಉದ್ಘಾಟನೆಗೆ ದಿನಾಂಕ ಫಿಕ್ಸ್- RSS ನಾಯಕ ಮೋಹನ್ ಭಾಗವತ್ ರಿಂದ ಅಚ್ಚರಿಯಂತೆ ಘೋಷಣೆ

Ram Mandir: ಅಯೋಧ್ಯಾ ರಾಮ ಮಂದಿರ ಉದ್ಘಾಟನೆಗೆ ದಿನಾಂಕ ಫಿಕ್ಸ್- RSS ನಾಯಕ ಮೋಹನ್ ಭಾಗವತ್ ರಿಂದ ಅಚ್ಚರಿಯಂತೆ ಘೋಷಣೆ

3 comments
Ram Mandir

Ram Mandir: ವಿಜಯ ದಶಮಿ ಹಿನ್ನೆಲೆಯಲ್ಲಿ ನಾಗ್ಪುರದಲ್ಲಿರುವ ಆರ್‌ಎಸ್‌ಎಸ್‌ ಕಚೇರಿಯಲ್ಲಿ ಆಯೋಜಿಸಿದ್ದ ವಿಜಯ ದಶಮಿ ಉತ್ಸವದಲ್ಲಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್‌ ಭಾಗವತ್‌ (Mohan Bhagwat) ಮಹತ್ವದ ಮಾಹಿತಿ ನೀಡಿದ್ದಾರೆ.

ಹೌದು, ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ರಾಮಮಂದಿರದ (Ram Mandir) ಉದ್ಘಾಟನೆಗೆ ದಿನಾಂಕ ನಿಗದಿಯಾಗಿರುವ ಕುರಿತು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್‌ ಭಾಗವತ್‌ (Mohan Bhagwat) ಮಹತ್ವದ ಮಾಹಿತಿ ನೀಡಿದ್ದಾರೆ. “ಜನವರಿ 22ರಂದು ರಾಮ ಮಂದಿರದಲ್ಲಿ ರಾಮಲಲ್ಲಾನ ಪ್ರತಿಷ್ಠಾಪನೆಯಾಗುತ್ತದೆ” ಎಂದು ವಿಜಯದಶಮಿ ದಿನವೇ ಮೊಹನ್‌ ಭಾಗವತ್‌ ದಿನಾಂಕ ಘೋಷಿಸಿದ್ದಾರೆ.

ಈಗಾಗಲೇ ರಾಮಮಂದಿರ ವಿವಾದಕ್ಕೆ ಸಂಬಂಧಿಸಿದಂತೆ 2019ರ ನವೆಂಬರ್‌ 9ರಂದು ಸುಪ್ರೀಂ ಕೋರ್ಟ್‌ ಐತಿಹಾಸಿಕ ತೀರ್ಪು ನೀಡಿ, ರಾಮಜನ್ಮಭೂಮಿಯಲ್ಲಿಯೇ ರಾಮಮಂದಿರ ನಿರ್ಮಾಣಕ್ಕೆ ಅನುಮತಿ ನೀಡಿದೆ. 2020ರ ಆಗಸ್ಟ್‌ 5ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ.

ಮೊಹನ್‌ ಭಾಗವತ್‌ ಅವರು “ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದಲ್ಲಿ ಜನವರಿ 22ರಂದು ಪ್ರತಿಷ್ಠಾಪನೆ ಮಾಡಲಾಗುತ್ತದೆ. ಅದೇ ದಿನ ದೇಶದ ಎಲ್ಲ ದೇವಾಲಯಗಳಲ್ಲಿ ವಿಶೇಷ ಕಾರ್ಯಕ್ರಮ, ಧಾರ್ಮಿಕ ವಿಧಿವಿಧಾನ ಆಯೋಜಿಸಲಾಗುತ್ತದೆ” ಎಂದು ತಿಳಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದಿದ್ದಾರೆ.

“ರಾಮಮಂದಿರವು ದೇಶದ ಶಾಂತಿ, ದೈವತ್ವ ಹಾಗೂ ಏಕತೆಯ ಸಂಕೇತವಾಗಿದೆ. ಅಮೃತ ಮಹೋತ್ಸವದ ವೇಳೆಯೇ ಮಂದಿರಕ್ಕೆ ಚಾಲನೆ ಸಿಗುತ್ತಿರುವುದು ಸಂತೋಷದ ಸಂಗತಿಯಾಗಿದೆ” ಎಂದರು. “ಜಗತ್ತಿನಲ್ಲಿ ಪ್ರತಿ ವರ್ಷ ಭಾರತದ ಘನತೆ, ಜನಪ್ರಿಯತೆ, ವರ್ಚಸ್ಸು ಹೆಚ್ಚಾಗುತ್ತಲೇ ಇದೆ. ಈ ವರ್ಷ ಜಿ-20 ಶೃಂಗಸಭೆಯನ್ನು ಭಾರತದಲ್ಲಿಯೇ ಆಯೋಜಿಸಿರುವುದು ಮಹತ್ವದ ಸಂಗತಿಯಾಗಿದೆ” ಎಂದರು.

ಮುಖ್ಯವಾಗಿ, ರಾಮಮಂದಿರಕ್ಕೆ ಚಾಲನೆ ನೀಡುವ ದಿನ ದೇಶಾದ್ಯಂತ 5 ಲಕ್ಷ ದೇವಾಲಯಗಳಲ್ಲಿ ರಾಮಲಲ್ಲಾನ ಪ್ರತಿಷ್ಠಾಪನೆ ವೇಳೆ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಆರ್‌ಎಸ್‌ಎಸ್‌ ಕಚೇರಿಗಳ ಪದಾಧಿಕಾರಿಗಳು ಈ ಕಾರ್ಯಕ್ರಮಗಳ ಉಸ್ತುವಾರಿ ವಹಿಸಿಕೊಳ್ಳಲಿದ್ದಾರೆ ಎಂದು ಟ್ರಸ್ಟ್‌ ತಿಳಿಸಿದೆ. “ರಾಮಮಂದಿರಕ್ಕೆ ಚಾಲನೆ ನೀಡುವ ದಿನ ಇಡೀ ದೇಶವೇ ರಾಮಮಯವಾಗಲಿದೆ. ದೇಶದ ಪ್ರತಿಯೊಂದು ದೇವಾಲಯಗಳಲ್ಲೂ ಸನಾತನ ಧರ್ಮದ ಅನುಯಾಯಿಗಳು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕು” ಎಂದು ಟ್ರಸ್ಟ್‌ ಪ್ರಧಾನ ಕಾರ್ಯದರ್ಶಿ ಚಂಪತ್‌ ರಾಯ್ ಕರೆ ನೀಡಿದ್ದಾರೆ.

ಇದನ್ನೂ ಓದಿ: ‘LPG’ ಗ್ಯಾಸ್ ಯೂಸ್ ಮಾಡೋರು ಮಿಸ್ ಮಾಡ್ದೆ ಈ ಸ್ಟೋರಿ ಓದಿ !!

You may also like

Leave a Comment