Post Office Recruitment 2023: ಭಾರತೀಯ ಅಂಚೆ ಇಲಾಖೆ(India Postal Department) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ (Post Office Recruitment 2023)ಮಾಡಿದ್ದು, ಒಟ್ಟು 11 ಸ್ಟಾಫ್ ಕಾರ್ ಡ್ರೈವರ್(Staff Car Driver) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಕೊನೆಯ ದಿನದ ಮೊದಲೇ ಅರ್ಜಿ ಸಲ್ಲಿಸುವುದು ಉತ್ತಮ.
ಮೇಲೆ ತಿಳಿಸಿದ ಹುದ್ದೆಗೆ 09,10, 2023 ಅರ್ಜಿ ಸಲ್ಲಿಕೆ ಆರಂಭಿಕ ದಿನವಾಗಿದ್ದು,ನವೆಂಬರ್ 24, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ(Last Date). ಆಸಕ್ತರು ಆಫ್ಲೈನ್/ ಪೋಸ್ಟ್ ಮೂಲಕ ಅರ್ಜಿ ಸಲ್ಲಿಸಬೇಕು.
ಅರ್ಜಿ ಶುಲ್ಕ:
SC/ST/ESM ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಇನ್ನುಳಿದ ಇತರೆ ಅಭ್ಯರ್ಥಿಗಳಿಗೆ ರೂ.100/- ಅರ್ಜಿ ಶುಲ್ಕ ಭಾರತೀಯ ಪೋಸ್ಟಲ್ ಆರ್ಡರ್ ಮೂಲಕ ಪಾವತಿ ಮಾಡಬೇಕಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ ಹೀಗಿದೆ:
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕೊನೆಯ ದಿನದ ಮೊದಲೇ ಕಳುಹಿಸಬೇಕು.
ವಿಳಾಸ: ಅಸಿಸ್ಟೆಂಟ್ ಡೈರೆಕ್ಟರ್ (Estt/Rectt)
O/o ಮುಖ್ಯ ಪೋಸ್ಟ್‌ಮಾಸ್ಟರ್ ಜನರಲ್
M.P. ವೃತ್ತ
ಭೋಪಾಲ್-462027
ಅರ್ಹತಾ ಮಾನದಂಡಗಳು ಹೀಗಿವೆ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಅನುಸಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಉತ್ತೀರ್ಣರಾಗಿರಬೇಕು.ವಯೋಮಿತಿ ಗಮನಿಸಿದರೆ, ಅಭ್ಯರ್ಥಿಗಳ ವಯಸ್ಸು ನವೆಂಬರ್ 24, 2023ಕ್ಕೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯಿರಲಿದ್ದು, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇರಲಿದೆ. ಅದೇ ರೀತಿ, SC/ST ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇರಲಿದೆ.
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಅನುಸಾರ, ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಡ್ರೈವಿಂಗ್ ಲೈಸೆನ್ಸ್, ಡ್ರೈವಿಂಗ್ ಟೆಸ್ಟ್ ,ಟ್ರೇಡ್ ಟೆಸ್ಟ್ ,ಥಿಯರಿ ಟೆಸ್ಟ್ ಮತ್ತು ಪ್ರಾಕ್ಟಿಕಲ್ ಟೆಸ್ಟ್ ನಡೆಯಲಿದೆ.ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಧ್ಯಪ್ರದೇಶದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹19,900-63,200 ವೇತನ ನೀಡಲಾಗುತ್ತದೆ.
ಇದನ್ನೂ ಓದಿ: KPSC ಸಿಟಿಐ ಹುದ್ದೆಗಳ ನೇಮಕ! ವಾಣಿಜ್ಯ ತೆರಿಗೆ ಪರಿವೀಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ!!!
