Kochi Blast: ಕೊಚ್ಚಿ ಕೇರಳದ ಎರ್ನಾಕುಲಂ ಜಿಲ್ಲೆಯ ಕಲಮಶ್ಶೇರಿಯಲ್ಲಿರುವ ಕ್ರೈಸ್ತ ಸಮುದಾಯದ ಕನ್ವೆನ್ಶನ್ ಸೆಂಟರ್‌ನಲ್ಲಿ ಬಾಂಬ್ ಸ್ಫೋಟ (Kochi Blast) ಪ್ರಕರಣದ ರೋಚಕ ಮಾಹಿತಿಗಳು ಹೊರಬಿದ್ದಿವೆ.
ಸಾವಿರಾರು ಕ್ರೈಸ್ತರು ಅಕ್ಟೋಬರ್ 29ರಂದು ಪ್ರಾರ್ಥನೆ ಸಲ್ಲಿಸುವ ಸಂದರ್ಭ ಸುಧಾರಿತ ಸ್ಫೋಟಕ ಸಾಧನ (IED) ಮೂಲಕ ಸ್ಫೋಟಗೊಳಿಸಲಾಗಿದೆ. 9.40ರ ಸುಮಾರಿಗೆ ಟಿಫಿನ್ ಬಾಕ್ಸ್‌ನಲ್ಲಿ ಐಇಡಿ ಇಟ್ಟು ಮೊದಲ ಬಾರಿಗೆ ಸ್ಫೋಟಿಸಲಾಗಿದೆ ಎಂದು ತಿಳಿದುಬಂದಿದೆ. ಈ ಸ್ಫೋಟದಲ್ಲಿ ಒಬ್ಬ ಮಹಿಳೆ ಮೃತಪಟ್ಟರೆ, 40ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಅದರಲ್ಲಿಯೂ ಗಾಯಗೊಂಡವರಲ್ಲಿ 10ಕ್ಕೂ ಅಧಿಕ ಮಂದಿಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಮೊದಲನೇ ಸ್ಫೋಟ ನಡೆದ ಕೆಲವೇ ನಿಮಿಷಗಳಲ್ಲಿ ನಾಲ್ಕೈದು ಬಾರಿ ಸ್ಫೋಟಿಸಲಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದು, ಇದರ ಉಗ್ರರ ಕೈವಾಡ ಇರುವ ಶಂಕೆ ವ್ಯಕ್ತವಾಗಿದೆ.
ಕೇರಳ ಸರ್ಕಾರ ಸ್ಫೋಟ ಸಂಭವಿಸಿದ ಬಳಿಕ ಶೀಘ್ರ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸಲಿದೆ ಎಂದು ತಿಳಿದುಬಂದಿದೆ. ಸುಧಾರಿತ ಸ್ಫೋಟಕಗಳ ಮೂಲಕ ಸ್ಫೋಟಿಸಲಾಗಿರುವುದನ್ನು ಕೇರಳ ಪೊಲೀಸ್ ಮಹಾ ನಿರ್ದೇಶಕರು ಖಾತ್ರಿಪಡಿಸಿದ್ದಾರೆ.ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಸ್ಫೋಟ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿದ್ದು, ಇವರ ಜೊತೆಗೆ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಬಂದಿದ್ದು, ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನು ಓದಿ: ದಕ್ಷಿಣ ಕನ್ನಡ: ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಹುದ್ದೆ; ಟೈಪಿಸ್ಟ್, ಸ್ಟೆನೋಗ್ರಾಫರ್, ಜವಾನ ಹುದ್ದೆಗೆ ಅರ್ಜಿ ಆಹ್ವಾನ!!!
