KJ George : ರೈತರಿಗೆ ಇಂಧನ ಸಚಿವ ಕೆ. ಜೆ .ಜಾರ್ಜ್ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ. ಇಂಧನ ಸಚಿವರಾದ ಕೃಷಿ ಸಚಿವರಾದ ಕೆ.ಜೆ.ಚಾರ್ಜ್(KJ George) ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮೆಸ್ಕಾಂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ರೈತರಿಗೆ (Farmers)ಪಂಪ್ ಸೆಟ್ ಗಳಿಗೆ(Pump Set)5 ಗಂಟೆ ವಿದ್ಯುತ್ ಪೂರೈಸಲಾಗುತ್ತಿದ್ದು, ಅದನ್ನು ರಾಜ್ಯಾದ್ಯಂತ 7 ಗಂಟೆಗೆ ಹೆಚ್ಚಳ ಮಾಡಲಾಗುವ ಕುರಿತು ಶೀಘ್ರವೇ ನಿರ್ಣಯ ಕೈಗೊಳ್ಳುವ ಭರವಸೆ ನೀಡಿದ್ದಾರೆ.
ಪಂಜಾಬ್, ಉತ್ತರ ಪ್ರದೇಶದಿಂದ ವಿದ್ಯುತ್ ಖರೀದಿ ಮಾಡಲಾಗುತ್ತಿದ್ದು, ಬೇಡಿಕೆ ಕಡಿಮೆಯಾಗಿರುವ ಹಿನ್ನೆಲೆ ಹಿಮಾಚಲ ಪ್ರದೇಶದಿಂದ ವಿದ್ಯುತ್ ಖರೀದಿ ಮಾಡುತ್ತಿಲ್ಲ. ಈ ಕುರಿತು ಶೀಘ್ರದಲ್ಲಿ ಮುಖ್ಯಮಂತ್ರಿಗಳು ಸಭೆ ನಡೆಸಲಿದ್ದು,ರಾಜ್ಯಾದ್ಯಂತ ಕೃಷಿ ಪಂಪ್ ಸೆಟ್ ಗಳಿಗೆ 7 ಗಂಟೆ ವಿದ್ಯುತ್ ಪೂರೈಕೆ ಮಾಡಲಾಗುವ ಕುರಿತು ತೀರ್ಮಾನ ಕೈಗೊಳ್ಳಲಾಗುವ ಸಾಧ್ಯತೆ ಕುರಿತು ಇಂಧನ ಸಚಿವ ಕೆ.ಜೆ. ಚಾರ್ಜ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: Deepavali 2023: ದೀಪಾವಳಿಯಂದು ಈ ದಿಕ್ಕಿನಲ್ಲಿ ದೀಪ ಹಚ್ಚುವುದು ಶುಭವಲ್ಲ, ಲಕ್ಷ್ಮಿ ದೇವಿ ಕೋಪಗೊಳ್ಳುವುದು ಖಂಡಿತ!!!
