Gruhalakshmi Scheme: ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆಯ (Gruhalakshmi Scheme) ಅಡಿಯಲ್ಲಿ, ಎರಡು ಸಾವಿರ ರೂಪಾಯಿಯಂತೆ ಪ್ರತಿ ಕುಟುಂಬದ ಒಬ್ಬ ಮಹಿಳೆಗೆ ತಿಂಗಳಿಗೆ 2,000 ರೂಪಾಯಿಯನ್ನು ಈಗಾಗಲೇ ಯಜಮಾನಿಯರ ಖಾತೆಗೆ ಸರ್ಕಾರವು ಹಣ ಜಮಾ ಮಾಡಿದೆ . ಇನ್ನು ಕೆಲವರ ಖಾತೆಗೆ ಹಣ ಜಮಾ ಪ್ರಕ್ರಿಯೆ ನಡೆಯುತ್ತಿದೆ. ಆದರೆ ಕೆಲವು ಮಹಿಳೆಯರ ಖಾತೆಗೆ ಇನ್ನೂ ಹಣ ಜಮಾ ಆಗಿಲ್ಲ. ಗೃಹಲಕ್ಷ್ಮಿ ಯೋಜನೆಯ ಹಣದ ನಿರೀಕ್ಷೆಯಲ್ಲಿರುವ ಮಹಿಳೆಯರು ಇದರಿಂದ ಚಿಂತೆಗೆ ಒಳಗಾಗಿದ್ದಾರೆ.
ಇದೀಗ ಈ ಕುರಿತು ಸಿಎಂ ಸಿದ್ದರಾಮಯ್ಯ ಸುದ್ದಿಗಾರರ ಜೊತೆ ಮಾತನಾಡಿ, ಈ ತಿಂಗಳು 100% ಅರ್ಜಿದಾರ ಯಜಮಾನಿಯರ ಖಾತೆಗೆ ಹಣ ವರ್ಗಾವಣೆ ಮಾಡುತ್ತೇವೆ. ಗೃಹಲಕ್ಷ್ಮಿ ಯೋಜನೆ ಮೂಲಕ ದೇಶದಲ್ಲೇ ಅತಿ ದೊಡ್ಡ ಮೊತ್ತದ ಮಹಿಳಾ ಸಬಲೀಕರಣ ಯೋಜನೆಯನ್ನು ಯಶಸ್ವಿಯಾಗಿ ಪ್ರತಿ ಮನೆಗೆ ತಲುಪಿಸುತ್ತೇವೆ ಎಂದು ಹೇಳಿದ್ದಾರೆ.
ಈಗಾಗಲೇ ಗೃಹಲಕ್ಷ್ಮಿ ಯೋಜನೆ ಹಣ ಜಮೆ ಆಗದಿರುವ ಅರ್ಹ ಫಲಾನುಭವಿಗಳನ್ನು ಗುರುತಿಸಿ ದೋಷ ಸರಿಪಡಿಸುವ ಕಾರ್ಯವನ್ನು ಇಲಾಖೆಯು ಕೈಗೊಂಡಿದೆ. ಎಲ್ಲಾ ಫಲಾನುಭವಿಗಳಿಗೂ ಶೀಘ್ರವೇ ಹಣ ತಲುಪಿಸಲಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಇದನ್ನೂ ಓದಿ: ಪತಿಯ ತೀರದ ಕಾಮ ದಾಹ! ಕಾಮದಾಹಕ್ಕೆ ಸುಸ್ತಾದ ಪತ್ನಿ ಮಾಡೇ ಬಿಟ್ಲು ಮಾಸ್ಟರ್ ಪ್ಲ್ಯಾನ್!!!
