Home » KSRTC: ದೀಪಾವಳಿ ಹಬ್ಬಕ್ಕೆ KSRTCಯಿಂದ ನಾಡಿನ ಜನತೆಗೆ ಭರ್ಜರಿ ಗುಡ್ ನ್ಯೂಸ್ !!

KSRTC: ದೀಪಾವಳಿ ಹಬ್ಬಕ್ಕೆ KSRTCಯಿಂದ ನಾಡಿನ ಜನತೆಗೆ ಭರ್ಜರಿ ಗುಡ್ ನ್ಯೂಸ್ !!

1 comment

KSRTC: ನಾಡಿನಲ್ಲಿ ಹಬ್ಬ ಹರಿದಿನಗಳ ಸಂದರ್ಭದಲ್ಲಿ ಹೆಚ್ಚುವರಿ ಬಸ್ ಗಳನ್ನು ನೀಡುವುದರ ಮೂಲಕ ಜನರು ತಮ್ಮ ಊರಿಗೆ ಹೋಗಲು ಅನುಕೂಲ ಮಾಡಿಕೊಡುವ ಕೆಎಸ್ಆರ್ಟಿಸಿ( KSRTC) ಸಂಸ್ಥೆಯು ಇದೀಗ ದೀಪಾವಳಿ ಹಬ್ಬಕ್ಕೂ ಜನರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ.

ಹೌದು, ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ನಗರಗಳಲ್ಲಿರೋ ಜನರು ತಮ್ಮ ತಮ್ಮ ಊರುಗಳಿಗೆ ತೆರಳಲುಲ ಕೆ ಎಸ್ ಆರ್ ಟಿಸಿಯಿಂದ ಪ್ರಯಾಣಿಕರ ಅನುಕೂಲಕ್ಕಾಗಿ ನವೆಂಬರ್ 10ರಿಂದ 2,000 ಹೆಚ್ಚುವರಿ ಬಸ್ ಗಳ ಸಂಚಾರದ ವ್ಯವಸ್ಥೆಯನ್ನು ಕೆಲವು ಅನುಕೂಲಕರ ಸೌಲಭ್ಯಗಳನ್ನು ಮಾಡಿದೆ. ಈ ಮೂಲಕ ಸಾರಿಗೆ ಇಲಾಖೆಯು ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಈ ಕುರಿತಂತೆ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ದಿನಾಂಕ 12.11.2023 ರಂದು ನರಕ ಚತುರ್ದಶಿ ಹಾಗೂ ದಿನಾಂಕ:14.11.2023 ರಂದು ಬಲಿಪಾಡ್ಯಮಿ ಹಬ್ಬದ ಪ್ರಯುಕ್ತ ಕರಾರಸಾ ನಿಗಮ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ 10.11.2023 ರಿಂದ 12.11.2023 ರವರೆಗೆ ಬೆಂಗಳೂರಿನಿAದ 2000 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ ಎಂದು ತಿಳಿಸಿದೆ.

ಎಲ್ಲಿಗೆಲ್ಲಾ ಬಸ್ ಸೌಲಭ್ಯ?
ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರ್, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ.
• ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ.
• ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಬಕೋಣ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುವುದು.

ಇದಿಷ್ಟೇ ಅಲ್ಲದೆ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಜೊತೆಗೆ ರಿಯಾಯಿತಿ ದರದಲ್ಲೂ ಟಿಕೆಟ್ ವಿತರಿಸಲು ಅವಕಾಶ ನೀಡಲಾಗಿದೆ.

ಬುಕಿಂಗ್ ಹೇಗೆ? ಏನೆಲ್ಲಾ ರಿಯಾಯಿತಿ ಇದೆ
ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್‌ಅಪ್ ಪಾಯಿಂಟ್‌ನ ಹೆಸರನ್ನು ಗಮನಿಸುವಂತೆ ಕೋರಲಾಗಿದೆ.
• ಇ-ಟಿಕೇಟ್ ಬುಕಿಂಗ್‌ನ್ನು www.ksrtc.karnataka.gov.in ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ.
• ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ & ಬರುವ ಪ್ರಯಾಣದ ಟಿಕೇಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು.

ಇದನ್ನೂ ಓದಿ: MP Renukacharya: ಕಾಂಗ್ರೆಸ್ ಸೇರ್ಪಡೆ ವಿಚಾರ- ಮಹತ್ವದ ಹೇಳಿಕೆ ನೀಡಿದ ಎಂ ಪಿ ರೇಣುಕಾಚಾರ್ಯ !!

You may also like

Leave a Comment