Home » Uttarakhand: ಏಕಾಏಕಿ ಕುಸಿದ ನಿರ್ಮಾಣ ಹಂತದಲ್ಲಿದ್ದ ಸುರಂಗ – 40 ಮಂದಿ ಕಾರ್ಮಿಕರು ಸಿಲುಕಿರುವ ಶಂಕೆ!!

Uttarakhand: ಏಕಾಏಕಿ ಕುಸಿದ ನಿರ್ಮಾಣ ಹಂತದಲ್ಲಿದ್ದ ಸುರಂಗ – 40 ಮಂದಿ ಕಾರ್ಮಿಕರು ಸಿಲುಕಿರುವ ಶಂಕೆ!!

1 comment
Uttarakhand

Uttarakhand: ಇಂದು ಮುಂಜಾನೆ ಉತ್ತರಕಾಶಿ (ಉತ್ತರಾಖಂಡ)ದ (Uttarakhand)ನಿರ್ಮಾಣ ಹಂತದಲ್ಲಿರುವ ಸುರಂಗದ ಒಂದು ಭಾಗ ಕುಸಿದ ಪರಿಣಾಮ ಸುಮಾರು 40 ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಘಟನೆ ನಡೆದಿದೆ.

ಉತ್ತರಕಾಶಿ ಜಿಲ್ಲೆಯ ಬ್ರಹ್ಮಖಾಲ್-ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯ ಸಿಲ್ಕ್ಯಾರಾ ಮತ್ತು ದಾಂಡಲ್ಗಾಂವ್ ನಡುವೆ ಸುರಂಗದ ನಿರ್ಮಾಣ ಕಾರ್ಯ ನಡೆಯುತ್ತಿತ್ತು. ನಾಲ್ಕೂವರೆ ಕಿಲೋ ಮೀಟರ್ ಉದ್ದದ ಸುರಂಗದಲ್ಲಿ 150 ಮೀಟರ್ ಉದ್ದದ ಭಾಗ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಕುಸಿದುಬಿದ್ದಿದೆ. ಈ ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಉತ್ತರಕಾಶಿ ಪೊಲೀಸ್ ವರಿಷ್ಠಾಧಿಕಾರಿ ಅರ್ಪಣ್ ಯದುವಂಶಿ ಅವರು ರಕ್ಷಣಾ ತಂಡದೊಂದಿಗೆ ಸ್ಥಳಕ್ಕೆ ಧಾವಿಸಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ. ಇದುವರೆಗೂ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಶೀಘ್ರದಲ್ಲೇ ಎಲ್ಲ ಕಾರ್ಮಿಕರನ್ನು ಸುರಕ್ಷಿತವಾಗಿ ರಕ್ಷಿಸುವ ಭರವಸೆಯನ್ನು ಉತ್ತರಕಾಶಿ ಪೊಲೀಸ್ ವರಿಷ್ಠಾಧಿಕಾರಿ ನೀಡಿದ್ದಾರೆ

ಇದನ್ನೂ ಓದಿ:  Dhaba Owner Murder: ದೀಪಾವಳಿ ದಿನವೇ ಕೆಲಸಗಾರನಿಂದ ಮಾಲಿಕನ ಭೀಕರ ಹತ್ಯೆ- ಭಯ ಹುಟ್ಟಿಸುತ್ತೆ ಕಾರಣ!!

You may also like

Leave a Comment