Home » Gruha Lakshmi Scheme: ಗೃಹಲಕ್ಷ್ಮೀ ಹಣ ಬಾರದವರು ಟೆನ್ಶನ್ ಬಿಟ್ಟು ಈ ಡಾಕ್ಯುಮೆಂಟ್ ರೆಡಿ ಮಾಡಿ – ಇನ್ನು ಮನೆಬಾಗಿಲಿಗೆ ಬರುತ್ತೆ 2,000!!

Gruha Lakshmi Scheme: ಗೃಹಲಕ್ಷ್ಮೀ ಹಣ ಬಾರದವರು ಟೆನ್ಶನ್ ಬಿಟ್ಟು ಈ ಡಾಕ್ಯುಮೆಂಟ್ ರೆಡಿ ಮಾಡಿ – ಇನ್ನು ಮನೆಬಾಗಿಲಿಗೆ ಬರುತ್ತೆ 2,000!!

1 comment
Gruha Lakshmi Scheme money

Gruha Lakshmi Scheme money : ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಕೂಡ ಒಂದಾಗಿದ್ದು, ಈಗಾಗಲೇ ಕೆಲವು ಮಹಿಳೆಯರ ಖಾತೆಗೆ ಹಣ ಜಮಾ ಆಗಿದ್ದು, ಇನ್ನೂ ಕೆಲವರ ಅಕೌಂಟ್ಗೆ ಜಮೆ ಆಗಿಲ್ಲ. ಈ ಹಿನ್ನಲೆ ರಾಜ್ಯಾದ್ಯಂತ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ನಡುವೆ ಗೃಹ ಲಕ್ಷ್ಮೀ ಯೋಜನೆಯ ಹಣ (Gruha Lakshmi Scheme money ) ಬರದಿದ್ದರೆ ಹೆಲ್ಪ್‌ಲೈನ್‌ಗೆ ಕರೆ ಮಾಡಲು ಅವಕಾಶ ಕಲ್ಪಿಸುವ ಬಗ್ಗೆ ಲಕ್ಷ್ಮೀ ಹೆಬ್ಬಾಳ್ಕರ್(Lakshmi Hebbalkar) ಮಾಹಿತಿ ನೀಡಿದ್ದರು.

ಗೃಹ ಲಕ್ಷ್ಮೀ ಯೋಜನೆಯ ಹಣ ಜಮೆ ಆಗದೇ ಇರುವ ಯಜಮಾನಿಯರಿಗೆ ರಾಜ್ಯ ಸರ್ಕಾರವು ಸಂತಸದ ಸುದ್ದಿ ನೀಡಿದ್ದು, ಗೃಹಲಕ್ಷ್ಮಿ ಯೋಜನೆಯ ಹಣವನ್ನು ಅರ್ಹ ಪಲಾನುಭವಿಗಳಿಗೆ ತಲುಪಿಸಲು ಮಹತ್ವದ ಕ್ರಮ ಕೈಗೊಂಡಿದೆ. ಅಂಗನವಾಡಿ ಕಾರ್ಯಕರ್ತೆಯರು ಮನೆಗಳಿಗೆ ಹೋಗಿ ಅರಿವು ಮೂಡಿಸಿ ಗೃಹಲಕ್ಷ್ಮಿ ಯೋಜನೆಗೆ ಯಜಮಾನಿಯರನ್ನು ಸೇರ್ಪಡೆ ಮಾಡುವ ಕಾರ್ಯ ನಡೆಯುತ್ತಿದೆ. ಈ ನಡುವೆ ಬ್ಯಾಂಕ್ ಖಾತೆಯಲ್ಲಿ ಏನಾದರೂ ಸಮಸ್ಯೆಯಿದ್ದರೆ ಅಂಚೆ ಕಚೇರಿಯಲ್ಲಿ ಖಾತೆ ತೆರೆದು ಗೃಹಿಣಿಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಪಾವತಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.

ರಾಜ್ಯದಲ್ಲಿ ಸುಮಾರು 33 ಐಪಿಪಿಬಿ (India Post payment) ಶಾಖೆಗಳಿದ್ದು, ಹಾಗಾಗಿ ಇಲ್ಲಿ ಖಾತೆ ತೆರೆದರೆ ಗೃಹಲಕ್ಷ್ಮಿ ಯೋಜನೆಯ ಹಣ ಬಹಳ ಬೇಗ ಮಹಿಳೆಯರ ಖಾತೆ ತಲುಪಲಿದೆ. ಪೋಸ್ಟ್ ಆಫೀಸ್ ಖಾತೆ ತೆರೆದ ಕೆಲವೇ ಗಂಟೆಗಳಲ್ಲಿ ಹಲವು ಮಹಿಳೆಯರಿಗೆ ಹಣ ಜಮೆ ಆಗಿದೆ ಎನ್ನಲಾಗಿದೆ. ಈ ನಿಟ್ಟಿನಲ್ಲಿ ಮಹಿಳೆಯರಿಗೆ ಪೋಸ್ಟ್ ಆಫೀಸ್ ನಲ್ಲಿ ಅಕೌಂಟ್ ಮಾಡಿಸಲು ಸೂಚನೆ ನೀಡಲಾಗಿದೆ.

ಗೃಹಲಕ್ಷ್ಮಿ ಯೋಜನೆಗೆ ಬೇಕಾಗುವ ದಾಖಲೆಗಳು
ಈ ಯೋಜನೆಗೆ ಕಡ್ಡಾಯವಾಗಿ ಬಿಪಿಎಲ್ ಕಾರ್ಡ್ ಅಥವಾ ಅಂತ್ಯೋದಯ ಕಾರ್ಡ್ ಬೇಕಾಗಿದ್ದು ಇಲ್ಲವೇ ಎಪಿಎಲ್ ಕಾರ್ಡ್ ಬೇಕಾಗುತ್ತದೆ. ಕುಟುಂಬದ ಮಹಿಳೆಯ ಗಂಡನ ಅಥವಾ ಪೋಷಕರ ಆಧಾರ್ ಕಾರ್ಡ್ ಬೇಕಾಗಿದ್ದು ಇದರ ಜೊತೆಗೆ ಮಹಿಳೆಯ ಬ್ಯಾಂಕ್ ಪಾಸ್ ಬುಕ್ ಬೇಕಾಗುತ್ತದೆ.ಮುಂದಿನ 15 ದಿನದೊಳಗೆ ಎಲ್ಲಾ ಫಲಾನುಭವಿಗಳ ಖಾತೆಗೆ ಹಣ ಪಾವತಿ ಮಾಡಲಾಗುತ್ತದೆ. ಈ ಕುರಿತ ಹೆಚ್ಚಿನ ಮಾಹಿತಿಗಾಗಿ 1902 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಮಹಿಳೆಯರು ಮಾಹಿತಿ ಪಡೆದುಕೊಳ್ಳಬಹುದು.

ಇದನ್ನೂ ಓದಿ: HSRP ನಂಬರ್ ಪ್ಲೇಟ್ ಹಾಕಲು ಈ ದಿನವೇ ಕೊನೆ ದಿನಾಂಕ- ಇಲ್ಲಾಂದ್ರೆ ಬೀಳಲಿದೆ ಭಾರೀ ಮೊತ್ತದ ದಂಡ

You may also like

Leave a Comment