Home » Madhu Bangarappa: ಉಪನ್ಯಾಸಕರಾಗೋ ಕನಸು ಕಂಡವರಿಗೆ ಬೊಂಬಾಟ್ ನ್ಯೂಸ್- ಶಿಕ್ಷಣ ಸಚಿವರಿಂದ ಹೊಸ ಘೋಷಣೆ!!

Madhu Bangarappa: ಉಪನ್ಯಾಸಕರಾಗೋ ಕನಸು ಕಂಡವರಿಗೆ ಬೊಂಬಾಟ್ ನ್ಯೂಸ್- ಶಿಕ್ಷಣ ಸಚಿವರಿಂದ ಹೊಸ ಘೋಷಣೆ!!

1 comment

Madhu Bangarappa: ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧುಬಂಗಾರಪ್ಪ Madhu Bangarappa)ರಾಜ್ಯದ ಬೋಧಕ ಹುದ್ದೆಗಳ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ(Good News)ನೀಡಿದ್ದಾರೆ. ಶೀಘ್ರದಲ್ಲಿಯೇ 2500 ಪಿಯು ಉಪನ್ಯಾಸಕರ ಹುದ್ದೆಗೆ ಅಧಿಸೂಚನೆ ಹೊರಡಿಸುವ ನಿಟ್ಟಿನಲ್ಲಿ ಪೂರಕ ವ್ಯವಸ್ಥೆ ಕಲ್ಪಿಸುವ ಕುರಿತು ಸಚಿವ ಮಧುಬಂಗಾರಪ್ಪ ಭರವಸೆ ನೀಡಿದ್ದಾರೆ.

ಮುಂಬರುವ ಬೆಳಗಾವಿ ಅಧಿವೇಶನದಲ್ಲಿ ಆರ್ಥಿಕ ಇಲಾಖೆ ಯೊಂದಿಗೆ ಚರ್ಚೆ ನಡೆಸಿ 2500 ಪಿಯು ಕಾಲೇಜು ಉಪನ್ಯಾಸಕರ ನೇಮಕಾತಿಗೆ ಆದೇಶ ಹೊರಡಿಸುವ ಭರವಸೆ ನೀಡಿದ್ದಾರೆ. 2020ರ ವರೆಗೆ ಖಾಲಿ ಇರುವ ಪದವಿ ಪೂರ್ವ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆ ಪ್ರಾರಂಭ ಮಾಡಲಾಗುತ್ತದೆ. ಈಗಾಗಲೇ ಆರ್ಥಿಕ ಇಲಾಖೆ 15,000 ಶಿಕ್ಷಕರ ನೇಮಕಾತಿಗೆ ಆದೇಶ ಹೊರಡಿಸಿದ್ದು, ಇದರ ನಡುವೆ, 13,500 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಮುಗಿದಿದೆ. ಇನ್ನುಳಿದ 1500 ಮತ್ತು 1000 ಸಹಿತ ಒಟ್ಟು 2500 ಉಪನ್ಯಾಸಕರ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರಾದ ಮಧು ಬಂಗಾರಪ್ಪರವರು ತಿಳಿಸಿದ್ದಾರೆ.

ಇದನ್ನೂ ಓದಿ: Gruhalakshmi scheme: ‘ಗೃಹಲಕ್ಷ್ಮೀ’ ಹಣ ಬಾರದವರಿಗೆ ಮಹತ್ವದ ಸುದ್ದಿ- ಮನೆಬಾಗಿಲಿಗೇ ಬರ್ತಾರೆ ಅಂಗನವಾಡಿ ಕಾರ್ಯಕರ್ತೆಯರು, ಬೇಗ ಈ ದಾಖಲೆ ರೆಡಿ ಮಾಡಿ

You may also like

Leave a Comment