Home » Mangaluru: ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಗಳ ಕ್ರೀಡಾಕೂಟಕ್ಕೆ ಎಚ್ ಡಿ ಕುಮಾರಸ್ವಾಮಿ ಅತಿಥಿ !! ಅಚ್ಚರಿ ಮೂಡಿಸಿದ ಪ್ರಭಾಕರ್ ಭಟ್ಟರ ನಡೆ

Mangaluru: ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಗಳ ಕ್ರೀಡಾಕೂಟಕ್ಕೆ ಎಚ್ ಡಿ ಕುಮಾರಸ್ವಾಮಿ ಅತಿಥಿ !! ಅಚ್ಚರಿ ಮೂಡಿಸಿದ ಪ್ರಭಾಕರ್ ಭಟ್ಟರ ನಡೆ

1 comment
Mangaluru

Mangaluru: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ಆರೆಸ್ಸೆಸ್ (RSS) ಹಿರಿಯ ಮುಖಂಡ ಹಾಗೂ ಪ್ರಮುಖ ನಾಯಕ ಡಾ. ಪ್ರಭಾಕರ ಭಟ್ ಕಲ್ಲಡ್ಕ (Dr Prabhakar Bhatt Kalladka) ಅವರ ನೇತೃತ್ವದ ಶ್ರೀರಾಮ ವಿದ್ಯಾಕೇಂದ್ರ ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ಇದೆ ಮೊದಲ ಬಾರಿಗೆ ಮುಖ್ಯಮಂತ್ರಿ ಎಚ್. ಡಿ.ಕುಮಾರಸ್ವಾಮಿ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿದೆ(Mangaluru news).

Image credit: Deccan herald

 

ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಡಿ.9ರಂದು ಹೊನಲು ಬೆಳಕಿನ ಕ್ರೀಡೋತ್ಸವ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್. ಡಿ.ಕುಮಾರಸ್ವಾಮಿ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ. ಇವರ ಜೊತೆಗೆ ಬಸನಗೌಡ ಪಾಟೀಲ್ ಯತ್ನಾಳ್ ಸಹಿತ ಹಲವು ಶಾಸಕರು, ಮಾಜಿ ಸಚಿವರು, ಉದ್ಯಮಿಗಳು, ಆಗಮಿಸಲಿದ್ದಾರೆ.

ಜಾತ್ಯತೀತ ಜನತಾದಳದ ಮುಖಂಡ, ಮಾಜಿ ಮುಖ್ಯಮಂತ್ರಿ ಎಚ್. ಡಿ.ಕುಮಾರಸ್ವಾಮಿ (HD Kumaraswamy) ಅವರನ್ನು ಮುಖ್ಯ ಅತಿಥಿಯನ್ನಾಗಿ ಆಹ್ವಾನಿಸಿರುವುದು ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗುತ್ತಿದೆ. ಬಿಜೆಪಿ ಮುಖಂಡರು ಹಾಗೂ ಬಿಜೆಪಿಗೆ ಸಂಬಂಧಿಸಿದ ರಾಜಕೀಯ ಮುಖಂಡರಷ್ಟೇ ಭಾಗಿಯಾಗುವ ಈ ಕಾರ್ಯಕ್ರಮದಲ್ಲಿ ಹಿಂದೊಮ್ಮೆ ಬಿಜೆಪಿಯ ಕಟ್ಟಾ ವಿರೋಧಿಯಾಗಿದ್ದ ಜೆಡಿಎಸ್ ಮುಖಂಡ ಕುಮಾರಸ್ವಾಮಿ ಅವರಿಗೆ ಆಹ್ವಾನ ನೀಡಿರುವುದು ಅಚ್ಚರಿಗೆ ಕಾರಣವಾಗಿದೆ. ಇದರ ಜೊತೆಗೆ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಹೆಸರು ಪಟ್ಟಿಯಲ್ಲಿಲ್ಲ ಎನ್ನಲಾಗಿದ್ದು, ಇದು ಕೂಡ ಚರ್ಚೆಗೆ ಕಾರಣವಾಗಿದೆ. ಬಿಜೆಪಿ ಜೆಡಿಎಸ್ ಮೈತ್ರಿ ನಡುವೆ ಕುಮಾರಸ್ವಾಮಿ ಅವರಿಗೆ ಹಿಂದುತ್ವ ಸಂಘಟನೆಗಳ ಕುರಿತು ಮೃದು ಧೋರಣೆ ತೋರುತ್ತಿದೆಯೇ ಎಂಬ ಅನುಮಾನ ಭುಗಿಲೆದ್ದಿದೆ.

ಇದನ್ನೂ ಓದಿ: ಡ್ರೋನ್ ವಿಚಾರದಲ್ಲಿ ನನಗೆ ಏನೆಲ್ಲಾ ಹಿಂಸೆ ಕೊಟ್ರು ಗೊತ್ತಾ?! ಅಯ್ಯೋ ದೇವ್ರೇ…. ಎಂದು ಬಿಕ್ಕಿ ಬಿಕ್ಕಿ ಅತ್ತ ಡ್ರೋನ್ ಪ್ರತಾಪ್

You may also like

Leave a Comment