Home » Rain Alert: ಒಂದು ವಾರದವರೆಗೆ ರಾಜ್ಯದ ಈ ಭಾಗಗಳಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ!!

Rain Alert: ಒಂದು ವಾರದವರೆಗೆ ರಾಜ್ಯದ ಈ ಭಾಗಗಳಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ!!

1 comment
Rain Alert

Rain Alert: ರಾಜ್ಯದಲ್ಲಿ ಹೆಚ್ಚಿನ ಕಡೆಗಳಲ್ಲಿ ಮೋಡ ಕವಿದ ವಾತಾವರಣ ಕಂಡುಬರುತ್ತಿದೆ. ಈ ನಡುವೆ,ಹವಾಮಾನ ಇಲಾಖೆ(IMD)ಮಳೆಯ ಕುರಿತು(Rain Alert)ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿ ರಾಜ್ಯದಲ್ಲಿ ಒಂದು ವಾರ ಮಳೆಯಾಗಲಿದೆ (Rain)ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನಿಂದ ಸೋಮವಾರದವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎನ್ನಲಾಗಿದೆ. ಜನವರಿ 5 ಮತ್ತು 6ರಂದು ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಸೂಚನೆ ನೀಡಿದೆ. ಇಂದಿನಿಂದ ಒಂದು ವಾರಗಳ ಕಾಲ ಮಳೆ ಸುರಿಯಲಿದೆ ಎನ್ನಲಾಗಿದೆ. ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಹಾಸನ, ಮೈಸೂರು, ಮಂಡ್ಯ, ದಾವಣಗೆರೆಯಲ್ಲಿ ಕೂಡ ಮಳೆಯಾಗುವ ಸಾಧ್ಯತೆಯಿದೆ.

ಇದನ್ನು ಓದಿ: Rain Alert: ಒಂದು ವಾರದವರೆಗೆ ರಾಜ್ಯದ ಈ ಭಾಗಗಳಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ!!

ಇಂದಿನಿಂದ ಜನವರಿ 8ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ತುಂತುರು ಮಳೆಯಾಗಲಿದ್ದು, ಇನ್ನು ಕೆಲ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಕಲಬುರಗಿ, ಉಡುಪಿ, ಬಾಗಲಕೋಟೆ, ಬೆಳಗಾವಿಯಲ್ಲಿ ಮಳೆಯಾಗಲಿದೆ. ಹಾವೇರಿ, ಗದಗ, ರಾಯಚೂರು, ಬೀದರ್, ವಿಜಯಪುರ, ಕೊಪ್ಪಳದಲ್ಲೂ ಮಳೆಯಾಗಲಿದೆ ಹವಾಮಾನ ಇಲಾಖೆ ತಿಳಿಸಿದೆ.

You may also like

Leave a Comment