Home » Ayodhya Ram Mandir: ರಾಮ ಮಂದಿರ ಪ್ರಾಣ ಪ್ರತಿಷ್ಠೆ ನಿಷೇಧ ಕೋರಿ ಪಿಐಎಲ್!!!

Ayodhya Ram Mandir: ರಾಮ ಮಂದಿರ ಪ್ರಾಣ ಪ್ರತಿಷ್ಠೆ ನಿಷೇಧ ಕೋರಿ ಪಿಐಎಲ್!!!

1 comment
Ayodhya Ram Mandir

Ayodhya Ram Mandir: ಅಯೋಧ್ಯೆಯ ರಾಮಮಂದಿರದಲ್ಲಿ (Ayodhya Ram Mandir) ಜನವರಿ 22ರಂದು ನಡೆಯಲಿರುವ ರಾಮ ಲಲ್ಲಾ ಪ್ರಾಣ ಪ್ರತಿಷ್ಠಾ (Pran Pratishtha) ಸಮಾರಂಭವನ್ನು ನಿಷೇಧಿಸುವಂತೆ ಕೋರಿ ಅಲಹಾಬಾದ್ ಹೈಕೋರ್ಟ್ನಲ್ಲಿ (Allahabad High Court) ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದನ್ನು ಸಲ್ಲಿಕೆ ಮಾಡಲಾಗಿದೆ.

ಅಯೋಧ್ಯಾ ರಾಮಮಂದಿರದ (Ayodhya Ram Mandir) ಪ್ರಾಣ ಪ್ರತಿಷ್ಠೆ ಕುರಿತು ಜ್ಯೋತಿರ್ಪೀಠದ ಶಂಕರಾಚಾರ್ಯರ ಆಕ್ಷೇಪಗಳನ್ನು ಉಲ್ಲೇಖಿಸಲಾಗಿ ಈ ಸಮಾರಂಭವನ್ನು ನಿಷೇಧಿಸುವಂತೆ ಮನವಿಯಲ್ಲಿ ಒತ್ತಾಯ ಮಾಡಲಾಗಿದೆ. ಉತ್ತರ ಪ್ರದೇಶದ ಘಾಜಿಯಾಬಾದ್ನ ಭೋಲಾ ದಾಸ್ ಎಂಬವರು ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Tamanna Bhatia: ಬೆಡ್ ರೂಂ ಸೀನ್ ಬಗ್ಗೆ ಮಿಲ್ಕ್ ಬ್ಯೂಟಿ ಶಾಕಿಂಗ್ ಹೇಳಿಕೆ; ನಟಿಯ ಮಾತು ಕೇಳಿ ಶಾಕ್ ಆದ ಫ್ಯಾನ್ಸ್!!

“ಜನವರಿ 22ರಂದು ಅಯೋಧ್ಯೆಯಲ್ಲಿ ಧಾರ್ಮಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ನಿರ್ಮಾಣ ಹಂತದಲ್ಲಿರುವ ದೇವಾಲಯದಲ್ಲಿ ರಾಮ್ ಲಲ್ಲಾನ ವಿಗ್ರಹವನ್ನು ಸ್ಥಾಪನೆ ಮಾಡಲಾಗುತ್ತಿದೆ. ಸಮಾರಂಭವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೆರವೇರಿಸಲಿದ್ದಾರೆಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಜ್ಯೋತಿಪೀಠಗಳ ಶಂಕರಾಚಾರ್ಯರ ಆಕ್ಷೇಪವಿದೆ. ಪುಷ್ಯ ಮಾಸದಲ್ಲಿ ಯಾವುದೇ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದಿಲ್ಲ. ದೇವಾಲಯ ಇನ್ನೂ ಅಪೂರ್ಣವಾಗಿದ್ದು, ಅಪೂರ್ಣ ದೇವಾಲಯದಲ್ಲಿ ಯಾವುದೇ ದೇವರನ್ನು ಪ್ರತಿಷ್ಠಾಪಿಸಲು ಸಾಧ್ಯವಿಲ್ಲ” ಎಂದು ಮನವಿಯಲ್ಲಿ ತಿಳಿಸಲಾಗಿದೆ.

You may also like

Leave a Comment