Home » pulse polio 2024: ಪೋಷಕರೇ ಗಮನಿಸಿ- ಈ ದಿನದಂದು ತಪ್ಪದೇ ನಿಮ್ಮ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಿ

pulse polio 2024: ಪೋಷಕರೇ ಗಮನಿಸಿ- ಈ ದಿನದಂದು ತಪ್ಪದೇ ನಿಮ್ಮ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಿ

1 comment

pulse polio 2024: ಲಿಯೋ ರಾಷ್ಟ್ರೀಯ ರೋಗನಿರೋಧಕ ದಿನದ ಅಂಗವಾಗಿ ಮಾರ್ಚ್ 3ರಂದು ನಡೆಯುವ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಪೋಷಕರು ತಪ್ಪದೇ ತಮ್ಮ ಪಲ್ಸ್ ಪೋಲಿಯೋ(pulse polio 2024) ಲಸಿಕೆಯನ್ನು ಹಾಕಬೇಕೆಂದು ವಿವಿಧ ಜಿಲ್ಲೆಯ ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.

ಇದನ್ನೂ ಓದಿ: Jahnavi kapoor: ಬ್ಲೌಸ್ ಹಾಕದೆ ಸೀರೆಯುಟ್ಟು ವಿಡಿಯೋ ಹರಿಬಿಟ್ಟ ಜಾಹ್ನವಿ ಕಪೂರ್- ವಿಡಿಯೋ ವೈರಲ್!!

ಅಂದಹಾಗೆ ಜಿಲ್ಲೆಯ ಎಲ್ಲಾ ಶಾಲೆಗಳು ಪಲ್ಸ್ ಪೋಲಿಯೋ ಕಾರ್ಯಕ್ರಮದ ಬಗ್ಗೆ ಪೋಲಿಯೋ ದಿನದ ಮುನ್ನಾ ದಿನವಾದ ಮಾರ್ಚ್ 02ರಂದು ಕೋವಿಡ್-19 ಮುನ್ನೆಚ್ಚರಿಕೆಯೊಂದಿಗೆ ಜಾಥಾ ಮಾಡಿ ಜನರಲ್ಲಿ ಜಾಗೃತಿ ಮೂಡಿಸಬೇಕು. ಮಾ.03ರ ಭಾನುವಾರದಂದು ಬೆಳಗ್ಗೆ 8 ಗಂಟೆಗೆ ಲಸಿಕಾ ಕಾರ್ಯಕ್ರಮವನ್ನು ಕೈಗೊಳ್ಳಲು ಶಾಲಾ ಕೊಠಡಿಗಳನ್ನು ತೆರೆದಿಡಬೇಕು. ಖಾಸಗಿ ಶಾಲೆಗಳಲ್ಲಿ ಪ್ಲೇ ಸ್ಕೂಲ್, ಎಲ್‌ಕೆಜಿ, ಯುಕೆಜಿ ಒಳಗೊಂಡಂತೆ 5 ವರ್ಷದೊಳಗಿನ ಮಕ್ಕಳಿದ್ದಲ್ಲಿ ಪಲ್ಸ್ ಪೋಲಿಯೋ ಲಸಿಕೆ ಹಾಕಲು ಪೋಷಕರನ್ನು ಪ್ರೇರೇಪಿಸುವಂತೆ ಕ್ರಮ ಕೈಗೊಳ್ಳಲು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.

ಅಲ್ಲದೆ ಲಸಿಕಾ ದಿನ ಎಲ್ಲಾ ಅಂಗನವಾಡಿ ಕೇಂದ್ರವನ್ನು ತೆರೆದಿಟ್ಟು ಮಕ್ಕಳಿಗೆ ಲಸಿಕೆ ಹಾಕಿಸಲು ಕ್ರಮ ಕೈಗೊಳ್ಳಬೇಕು. ತಾಯಂದಿರ ಸಭೆ, ಬಾಲ ವಿಕಾಸ ಸಮಿತಿ ಸಭೆಗಳಲ್ಲಿ ಲಸಿಕಾ ದಿನಾಂಕದ ಕುರಿತು, ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಮಹತ್ವದ ಬಗ್ಗೆ ತಿಳಿಸಬೇಕು. ಲಸಿಕಾ ಕಾರ್ಯಕ್ರಮದಲ್ಲಿ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು, ಮೇಲ್ವಚಾರಕರು, ಸ್ತ್ರೀ ಶಕ್ತಿ ಗುಂಪುಗಳ ಸದಸ್ಯರು, ಇಲಾಖೆಯ ಅಧಿಕಾರಿಗಳು ಸಕ್ರಿಯವಾಗಿ ಭಾಗವಹಿಸಬೇಕು ಎಂದು ಸೂಚಿಸಿದ್ದಾರೆ.

You may also like

Leave a Comment