Shikaripura: ಅನ್ಯಕೋಮಿನ ಯುವಕರು ಹಿಂದೂ ಯುವಕನೋರ್ವನಿಗೆ ಚಾಕುವಿನಿಂದ ಇರಿದು ಗಾಯಗೊಳಿಸಿದ ಘಟನೆಯೊಂದು ಫೆ.6 (ನಿನ್ನೆ) ಅಂದರೆ ಮಂಗಳವಾರದಂದು ರಾತ್ರಿ ನಡೆದಿದೆ. ಈ ಘಟನೆ ದೊಡ್ಡಪೇಟೆಯನ್ನು ನಡೆದಿದೆ.
ಇದನ್ನೂ ಓದಿ: Uttar Pradesh: ಚರಂಡಿ ನೀರು ತುಂಬಿದ ರಸ್ತೆ ಮೇಲೆಯೇ ಜೋಡಿಯ ಮದುವೆ ಸಂಭ್ರಮ

ಅಜಾಗರೂಕತೆಯಿಂದ ದ್ವಿಚಕ್ರ ವಾಹವನ್ನು ಓಡಿಸುತ್ತಿದ್ದನ್ನು ಪ್ರಶ್ನಿಸಿದ್ದಕ್ಕೆ ಯುವಕನಿಗೆ ಅನ್ಯಕೋಮಿನ ನಾಲ್ವರು ಯುವಕರ ತಂಡ ಚಾಕುವಿನಿಂದ ಇರಿದಿದ್ದಾರೆ. ಗಾಯಗೊಂಡ ಯುವಕ ಕುಮದ್ವತಿ ಕಾಲೇಜಿನಲ್ಲಿ ಕಂಪ್ಯೂಟರ್ ಆಪರೇಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವುದಾಗಿ ವರದಿಯಾಗಿದೆ.
ಚಾಕು ಇರಿತಕ್ಕೊಳಗಾದ ಯುವಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿಸಿದ್ದು, ಚಿಕಿತ್ಸೆ ಕೊಡಿಸಿ ನಂತರ ಶಿವಮೊಗ್ಗ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ವರದಿಯಾಗಿದೆ.
ಘಟನೆ ನಡೆದ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಹಾಗೂ ಸಂಸದ ಬಿ.ವೈ.ರಾಘವೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹಿಂದೂ ಸಂಘಟನೆ ಪದಾಧಿಕಾರಿಗಳು ಹಾಗೂ ಸ್ಥಳೀಯರು ಕೂಡಲೇ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯ ಮಾಡಿದ್ದಾರೆ. ವರದಿ ಪ್ರಕಾರ, ಈ ಘಟನೆ ಸಂಬಂಧ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
