Home » Lok Sabha election war: ಲೋಕಸಭೆ ಕಾಂಗ್ರೆಸ್ಸ್ ಅಭ್ಯರ್ಥಿಗಳ ಎರಡನೆಯ ಪಟ್ಟಿ ಪ್ರಕಟ, 43 ಅಭ್ಯರ್ಥಿಗಳ ಘೋಷಣೆ

Lok Sabha election war: ಲೋಕಸಭೆ ಕಾಂಗ್ರೆಸ್ಸ್ ಅಭ್ಯರ್ಥಿಗಳ ಎರಡನೆಯ ಪಟ್ಟಿ ಪ್ರಕಟ, 43 ಅಭ್ಯರ್ಥಿಗಳ ಘೋಷಣೆ

5 comments
Karnataka Congress

Congress Announces Second List of Candidates: ಲೋಕಸಭಾ ಚುನಾವಣೆಗೆ (LOK SABHA ELECTIONS 2024) ಇದೀಗ ಕಾಂಗ್ರೆಸ್‌ ಪಕ್ಷವು ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಹಲವು ರಾಜ್ಯಗಳ 43 ಅಭ್ಯರ್ಥಿಗಳ ಹೆಸರಿದ್ದು, ಪಟ್ಟಿಯಲ್ಲಿ ಕರ್ನಾಟಕದ ಯಾವುದೇ ಅಭ್ಯರ್ಥಿಯ ಹೆಸರು ಪ್ರಕಟಿಸಿಲ್ಲ.
ಇಂದು ಸಂಜೆ ದೆಹಲಿಯಲ್ಲಿ ಕಾಂಗ್ರೆಸ್‌ ನಾಯಕ ಕೆ.ಸಿ.ವೇಣುಗೋಪಾಲ್‌ ರವರು ಮತ್ತು ಅಜಯ್‌ ಮಕೇನ್‌ ರವರು ಕಾಂಗ್ರೆಸ್ ಅಭ್ಯರ್ಥಿಗಳ ಎರಡನೆಯ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.

ಈ ಪಟ್ಟಿಯಲ್ಲಿ ಮಧ್ಯಪ್ರದೇಶದಲ್ಲಿ ಮಾಜಿ ಸಿಎಂ ಕಮಲನಾಥ್‌ ಪುತ್ರ ನಕುಲ್‌ ನಾಥ್‌ ಗೆ ಬಿಂಡ್ವಾರ ಕ್ಷೇತ್ರದಿಂದಲೇ ಮತ್ತೊಮ್ಮೆ ಟಿಕೆಟ್‌ ನೀಡಲಾಗಿದೆ. ಇನ್ನು ಅಸ್ಸಾಂನಿಂದ ಮಾಜಿ ಸಿಎಂ ತರುಣ್‌ ಗೋಗೋಯ್‌ ಪುತ್ರರಾದ ಗೌರವ್‌ ಗೋಗೋಯ್‌ರನ್ನು ಜೊಹ್ರಾತ್‌ ಲೋಕ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ. ಈ ಹಿಂದೆ ಅವರು ಬಿಜೆಪಿ ಸೇರುವ ಕುರಿತು ಗುಮಾನಿಗಳಿದ್ದವು. ಈ ಪಟ್ಟಿಯಲ್ಲಿ ರಾಜಸ್ಥಾನದ ಮಾಜಿ ಸಿಎಂ ಅಶೋಕ್‌ ಗೆಹ್ಲೋಟ್‌ ಪುತ್ರ ವೈಭವ್‌ ಗೆಹ್ಲೋಟ್‌ಗೆ ಟಿಕೆಟ್‌ ನೀಡಲಾಗಿದೆ.

ಇದನ್ನೂ ಓದಿ: Belthangady: ತುರ್ತು ಸೇವೆಗೆ ಸಾಗುತ್ತಿದ್ದ ಆಂಬ್ಯುಲೆನ್ಸ್‌ ಚಾಲಕನ ಮೇಲೆ ಹಲ್ಲೆ; ವಿಡಿಯೋ ವೈರಲ್

ಇಲ್ಲಿಯ ತನಕ ಕರ್ನಾಟಕದ ಕೇವಲ 7 ಕ್ಷೇತ್ರಗಲ್ಲಿ ಅಭ್ಯರ್ಥಿ ಘೋಷಣೆ ಆಗಿದೆ. ಅದೂ ಸೇರಿದಂತೆ ಮೊದಲ ಪಟ್ಟಿಯಲ್ಲಿ ಒಟ್ಟು 39 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಘೋಷಿಸಿತ್ತು. ಆ ಪಟ್ಟಿಯಲ್ಲಿ ಕಾಂಗ್ರೆಸ್ ಅಧಿನಾಯಕ ರಾಹುಲ್‌ ಗಾಂಧಿ ಸೇರಿದಂತೆ ಪ್ರಮುಖ ನಾಯಕರ ಹೆಸರಿದ್ದವು ಅನ್ನೋದು ಗಮನಾರ್ಹ.

Board Exams: 5,8 ಮತ್ತು 9 ನೇ ತರಗತಿಗಳ ಬೋರ್ಡ್‌ ಪರೀಕ್ಷೆ ಸುಪ್ರೀಂ ತಡೆ, ಪರೀಕ್ಷೆ ಮುಂದೂಡಿಕೆ

ಈ ಎರಡನೆಯ ಪಟ್ಟಿಯಲ್ಲಿ ಗುಜರಾತ್, ರಾಜಸ್ಥಾನ, ಮಧ್ಯಪ್ರದೇಶ, ಉತ್ತರಾಖಂಡ, ಅಸ್ಸಾಂ ಸೇರಿ ಒಟ್ಟು 43 ಅಭ್ಯರ್ಥಿಗಳ ಹೆಸರಿದೆ. ಆ ಮೂಲಕ ಕಾಂಗ್ರೆಸ್ ಒಟ್ಟು 82 ಸ್ಥಾನಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಫೈನಲ್ ಮಾಡಿದೆ. ಟಿಕೆಟ್ ಆಕಾಂಕ್ಷಿ ಅಭ್ಯರ್ಥಿಗಳು ಕಾಂಗ್ರೆಸ್ ಟಿಕೆಟ್ ಪಡೆಯಲು ತುದಿಗಾಲಲ್ಲಿ ನಿಂತಿದ್ದಾರೆ.

You may also like

Leave a Comment