Home » Putturu: ಕೆಲಸದ ಆಮಿಷವೊಡ್ಡಿ ನಿರ್ಜನ ಮನೆಯೊಂದಕ್ಕೆ ಕರೆದುಕೊಂಡು ಹೋಗಿ ಯುವತಿಯ ಮೇಲೆ ಅತ್ಯಾಚಾರ; ಆರೋಪಿಗಳು ಅರೆಸ್ಟ್‌

Putturu: ಕೆಲಸದ ಆಮಿಷವೊಡ್ಡಿ ನಿರ್ಜನ ಮನೆಯೊಂದಕ್ಕೆ ಕರೆದುಕೊಂಡು ಹೋಗಿ ಯುವತಿಯ ಮೇಲೆ ಅತ್ಯಾಚಾರ; ಆರೋಪಿಗಳು ಅರೆಸ್ಟ್‌

1 comment
Putturu

Puttur: ಕೆಲಸದ ಆಮಿಷ ನೀಡಿದ ಯುವತಿಯೋರ್ವಳನ್ನು ಆಕೆಯನ್ನು ಕರೆಸಿ, ಅತ್ಯಾಚಾರ ಮಾಡಿದ ಘಟನೆಯೊಂದು ಬನ್ನೂರು ಗ್ರಾಮದ ಬೈಲು ಎಂಬಲ್ಲಿರುವ ಬಾಡಿಗೆ ಮನೆಯಲ್ಲಿ ನಡೆದಿದೆ.

ಇದನ್ನೂ ಓದಿ: Pratap simha: ಟಿಕೆಟ್ ಮಿಸ್ ಆದ ಬಗ್ಗೆ ಮನಮಿಡಿಯುವ ಪೋಸ್ಟ್ ಹಂಚಿಕೊಂಡ ಪ್ರತಾಪ್ ಸಿಂಹ- ಎಂತವರಿಗೂ ಅಯ್ಯೋ ಅನ್ನಿಸುತ್ತೆ!!

ಯುವತಿ ದೂರು ನೀಡಿದ 24 ಗಂಟೆಯೊಳಗೆ ಆರೋಪಿಗಳನ್ನು ಪೊಲೀಸರು ಬಂಧನ ಮಾಡಿದ್ದಾನೆ. ಈ ಘಟನೆ ಮಾ.13 ರಂದು ನಡೆದಿದೆ ಎಂದು ವರದಿಯಾಗಿದೆ. ವಾಮಂಜೂರು ಮೂಲದ ಯುವತಿಗೆ ಪುತ್ತೂರಿನ ಯುವಕನೊಂದಿಗೆ ಇನ್‌ಸ್ಟಾಗ್ರಾಮ್‌ ಮೂಲಕ ಸಂಪರ್ಕ ಉಂಟಾಗಿದೆ. ಆಕೆಯ ಕೋರಿಕೆಯ ಮೇರೆಗೆ ಯುವಕ ಪುತ್ತೂರಿನಲ್ಲಿ ಆಕೆಗೆ ಉದ್ಯೋಗಕ್ಕೆಂದು ತನ್ನ ಸ್ನೇಹಿತರಲ್ಲಿ ತಿಳಿಸಿದ್ದ ಎನ್ನಲಾಗಿದೆ.

ಯುವಕನ ಸ್ನೇಹಿತರಾದ ಕರ್ವೇಲು ಮತ್ತು ಕಡೇಶಿವಾಲಯದ ಇಬ್ಬರು ಇದನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ.

ವಾಮಂಜೂರಿನ ಆತನ ಸ್ನೆಹಿತೆಯ ನಂನರ್‌ ಪಡೆದು ಆಕೆಗೆ ಉದ್ಯೋಗ ಕೊಡಿಸುವುದಾಗಿ ಹೇಳಿ ಪುತ್ತೂರಿಗೆ ಕರೆಸಿದ್ದು, ಯುವತಿ ತನ್ನ ಸ್ನೇಹಿತೆಯ ಜೊತೆ ಮಾ.13 ರಂದು ಪುತ್ತೂರಿಗೆ ಬಂದಾಗ ಆಪಾದಿತ ಯುವಕರಿಬ್ಬರು ಆಕೆಗೆ ಪ್ರೊಫೈಲ್‌ ಬರೆಯಲೆಂದು ಹೇಳಿ ಆಕೆಯನ್ನು ಬನ್ನೂರು ಗ್ರಾಮದ ಬನ್ನೂರು ಬೈಲು ಬಳಿಯ ನಿರ್ಜನ ಮನೆಯೊಂದಕ್ಕೆ ಕರೆದು ಕೊಂಡು ಹೋಗಿದ್ದಾರೆ.

ಅಲ್ಲಿ ಅವರು ಒಬ್ಬಾಕೆಯನ್ನು ಹೊರಗೆ ಕುಳ್ಳಿರಿಸಿ, ಇನ್ನೋರ್ವಾಕೆಯನ್ನು ಮನೆಗೆ ಕರೆದೊಯ್ದು ಅತ್ಯಾಚಾರ ಮಾಡಿರುವುದಾಗಿ ಆರೋಪಿಸಲಾಗಿದೆ. ಘಟನೆಯ ನಂತರ ಯುವಕರಿಬ್ಬರು ಅಲ್ಲಿಂದ ಪರಾರಿಯಾಗಿದ್ದಾರೆ. ಸಂತ್ರಸ್ತೆ ಯುವತಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ನಂತರ ಪುತ್ತೂರು ಮಹಿಳಾ ಠಾಣಾ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ದೂರು ಸ್ವೀಕರಿಸಿದ್ದು, ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ.

You may also like

Leave a Comment