Mysore: ಶಾಸಕ ಹೆಚ್.ಡಿ.ರೇವಣ್ಣ ವಿರುದ್ಧ ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಪ್ರಕರಣ ಕುರಿತಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ ಕಿಡ್ನ್ಯಾಪ್ ಆಗಿದ್ದ ಸಂತ್ರಸ್ತ ಮಹಿಳೆಯನ್ನು ಎಸ್‌ಐಟಿ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ.
ಸಂತ್ರಸ್ತ ಮಹಿಳೆ ಹೆಚ್.ಡಿ.ರೇವಣ್ಣ ಅವರ ಆಪ್ತ ಸಹಾಯಕ ರಾಜಶೇಖರ್ ಅವರ ಕಾಳೇನಹಳ್ಳಿಯ ತೋಟದ ಮನೆಯಲ್ಲಿದ್ದರು ಎಂದು ವರದಿಯಾಗಿದೆ. ಸಂತ್ರಸ್ತ ಮಹಿಳೆ ಎ.29 ರಿಂದ ಅಲ್ಲೇ ಇದ್ದಿರುವುದಾಗಿ ತಿಳಿದು ಬಂದಿದೆ. ಮೈಸೂರಿನ ಹಣಸೂರು ತಾಲ್ಲೂಕಿನ ಕಾಳೇನಹಳ್ಳಿಯ ಮನೆಯಲ್ಲಿ ಮಹಿಳೆ ಪತ್ತೆಯಾಗಿದ್ದಾರೆ.
ಹೆಚ್.ಡಿ.ರೇವಣ್ಣ ಅವರ ಸಂಬಂಧಿ ಸತೀಶ್ ಬಾಬು ಅವರು ಸಂತ್ರಸ್ತ ಮಹಿಳೆಯನ್ನು ಎ.29 ರಂದು ಕರೆದುಕೊಂಡು ಹೋಗಿದ್ದು, ಅಂದಿನಿಂದ ಮಹಿಳೆ ರಾಜಶೇಖರ್ ಅವರ ತೋಟದ ಮನೆಯಲ್ಲಿ ಇಡಲಾಗಿತ್ತು ಎಂದು ವರದಿಯಾಗಿದೆ. ಸಂತ್ರಸ್ತೆಯನ್ನು ಬೆಂಗಳೂರಿಗೆ ಎಸ್‌ಐಟಿ ಪೊಲೀಸರು ಕರೆದುಕೊಂಡು ಬರುತ್ತಿದ್ದು, ಇಡೀ ಪ್ರಕರಣದ ಪ್ರಮುಖ ಸಾಕ್ಷಿಯಾಗುವ ಎಲ್ಲಾ ಸಾಧ್ಯತೆ ಇದೆ ಎನ್ನಲಾಗಿದೆ.
ಇದನ್ನೂ ಓದಿ: HD Revanna: ಹೆಚ್.ಡಿ.ರೇವಣ್ಣ ನಿವಾಸದಲ್ಲಿ ಎಸ್‌ಐಟಿ ತಂಡ; ಸಂತ್ರಸ್ತೆ ಸಮ್ಮುಖದಲ್ಲಿ ಸ್ಥಳ ಮಹಜರು
