Home » Karnataka Weather: ವರುಣ‌ನ ಕೃಪೆ: 6 ಜಿಲ್ಲೆಗೆ ಯೆಲ್ಲೋ ಅಲರ್ಟ್

Karnataka Weather: ವರುಣ‌ನ ಕೃಪೆ: 6 ಜಿಲ್ಲೆಗೆ ಯೆಲ್ಲೋ ಅಲರ್ಟ್

0 comments
Karnataka Weather

Karnataka Weather: ರಾಜ್ಯದ ಒಳನಾಡಿನ ಕೆಲವು ಕಡೆಗಳಲ್ಲಿ ಗುರುವಾರ ಮಳೆಯಾಗಿದ್ದು, ಕರಾವಳಿಯಲ್ಲಿ ಒಣ ಹವೆ ಇತ್ತು.

ಇದನ್ನೂ ಓದಿ: Apple Eating: ಒಳ್ಳೆದು ಅಂತ ಸೇಬು ಹಣ್ಣು ಇಷ್ಟ ಬಂದ ಟೈಮ್ ನಲ್ಲಿ ತಿನ್ನುವ ಹಾಗಿಲ್ಲ, ಅದಕ್ಕೂ ಹೊತ್ತು ಗೊತ್ತು ಇದೆ!

ಮೇ 8 ರಿಂದ 9ರ ಬೆಳಗ್ಗೆ 8.30ರವರೆಗೆ ಕಲಬುರಗಿ ಜಿಲ್ಲೆಯ ಸೇಡಂನಲ್ಲಿ 6 ಸೆಂ. ಮೀ., ಬೀದರ್, ಚಾಮರಾಜನಗರದ ಬೇಗೂರು, ಕೊಡಗು ಜಿಲ್ಲೆಯ ನಾಪೋಕ್ಲು ವಿನಲ್ಲಿ ತಲಾ 4 ಸೆಂ.ಮೀ., ಮಂಡ್ಯ ಜಿಲ್ಲೆಯ ಮದ್ದೂರು, ಕೃಷ್ಣರಾಜಸಾಗರದಲ್ಲಿ ತಲಾ 3 ಸೆಂ.ಮೀ., ರಾಮನಗರ, ಮಂಡ್ಯ, ಕೊಡಗು ಜಿಲ್ಲೆಯ ಭಾಗಮಮಂಡಲ, ಮೈಸೂರು, ಬೆಂಗಳೂರು ನಗರ, ಮೈಸೂರು ಜಿಲ್ಲೆಯ ನಂಜನಗೂಡು, ಯಾದಗಿರಿ ಜಿಲ್ಲೆಯ ಶಹಾ ಪುರದಲ್ಲಿ ತಲಾ 2 ಸೆಂ.ಮೀ. ಮಳೆಯಾಗಿದೆ.

ಇದನ್ನೂ ಓದಿ: Crop compensation : ರೈತರ ಖಾತೆಗೆ ಬೆಳೆ ಪರಿಹಾರ ಹಣ ಜಮಾ !!

ಮೇ 10ರಂದು ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜ ನಗರದ ಕೆಲವೆಡೆ ಮಳೆಯಾಗುವ ಸಂಭವವಿದೆ.

ಚಿಕ್ಕಮಗಳೂರು, ಹಾಸನ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ವಿಜಯನಗರ, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

You may also like

Leave a Comment