Home » Mangaluru : ಬೈಕ್‌ಗೆ ಕಾರು ಡಿಕ್ಕಿ – ಬೈಕ್‌ ಸವಾರ ಸ್ಥಳದಲ್ಲೇ ಮೃತ್ಯು

Mangaluru : ಬೈಕ್‌ಗೆ ಕಾರು ಡಿಕ್ಕಿ – ಬೈಕ್‌ ಸವಾರ ಸ್ಥಳದಲ್ಲೇ ಮೃತ್ಯು

by Praveen Chennavara
0 comments
Mangaluru

Mangaluru: ಕಾರು ಹಾಗೂ ಬೈಕ್‌ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾ.ಹೆ.75ರ ಪಡೀಲ್‌ ಬಳಿ ಸೋಮವಾರ ಮಧ್ಯಾಹ್ನ ನಡೆದಿದೆ.

ಬೈಕ್‌ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಮೃತ ಬೈಕ್‌ ಸವಾರನನ್ನು ಹರೀಶ್ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: CET Result: ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶದ ನಂತರ ಸಿಇಟಿ ಫಲಿತಾಂಶ ಪ್ರಕಟ

ಅಡ್ಯಾ‌ರ್ ಕಣ್ಣೂರು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಾರು, ಚಾಲಕಿಯ ನಿಯಂತ್ರಣ ತಪ್ಪಿ ಪಡೀಲ್ ನ ಖಾಸಗಿ ಆಸ್ಪತ್ರೆಯಿಂದ ಹೆದ್ದಾರಿಗೆ ಬರುತ್ತಿದ್ದ ಬೈಕ್‌ಗೆ ಢಿಕ್ಕಿ ಹೊಡೆದಿದೆ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ

ಮಂಗಳೂರು ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದಾರೆ.

ಇದನ್ನೂ ಓದಿ: ಮೇ 21 ಮತ್ತು 22 ರಂದು ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ : ಆರೆಂಜ್ ಅಲರ್ಟ್ ಘೋಷಣೆ

You may also like

Leave a Comment