Home » Congress Guarantees: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಅರ್ಧದಲ್ಲೇ ಕೈ ಬಿಡಲಿದೆ! ಗೃಹಸಚಿವರಿಂದ ಸ್ಪಷ್ಟನೆ!

Congress Guarantees: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಅರ್ಧದಲ್ಲೇ ಕೈ ಬಿಡಲಿದೆ! ಗೃಹಸಚಿವರಿಂದ ಸ್ಪಷ್ಟನೆ!

0 comments
Congress Guarantees

Congress Guarantees: ಈಗಾಗಲೇ ಕಳೆದ ಬಾರಿ ವಿಧಾನಸಭಾ ಚುನಾವಣೆ ನಡೆದಾಗ ಕಾಂಗ್ರೆಸ್
ಪಕ್ಷವು ಗೆದ್ದು, ಐದು ಗ್ಯಾರಂಟಿ ಯೋಜನೆಗಳಾದ ಶಕ್ತಿ ಯೋಜನೆ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮೀ, ಯುವನಿಧಿ ಯೋಜನೆಗೆ ಚಾಲನೆ ನೀಡಿದೆ. ಆದರೆ ಕಾಂಗ್ರೆಸ್‌ (Congress) ಸರ್ಕಾರ ಅಧಿಕಾರಕ್ಕೆ ಬಂದ ನಂತರದಲ್ಲಿ ಗ್ಯಾರಂಟಿ ಯೋಜನೆ, ಬಜೆಟ್ ವಿಚಾರದಲ್ಲಿ ಜನರಿಗೆ ಹೆಚ್ಚಿನ ಗೊಂದಲ ಆರಂಭ ಆಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ನ ಐದು ಖಾತ್ರಿ ಯೋಜನೆಗಳು ಅರ್ಧಕ್ಕೆ ನಿಲ್ಲುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿದೆ.

HSRP Number Plate: HSRP ನಂಬರ್ ಪ್ಲೇಟ್ ಅಳವಡಿಕೆ ದಂಡ ತಪ್ಪಿಸಲು ಈ ರೀತಿ ಮಾಡಿ!

ಹೌದು, ಈಗಾಗಲೇ ಐದು ಯೋಜನೆಗಳನ್ನು ಜಾರಿಗೆಗೊಳಿಸಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸರ್ಕಾರ ರಚಿಸುವಲ್ಲಿ ಯಶಸ್ವಿಯಾಗಿದ್ದು ನಿಮಗೆಲ್ಲ ಗೊತ್ತೇ ಇದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ತಾವು ನೀಡಿದ ಉಚಿತ ಭಾಗ್ಯ ಯೋಜನೆಗಳ ಮೂಲಕ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಭರವಸೆಯನ್ನು ಹೊಂದಿತ್ತು. ಆದರೆ ಕರ್ನಾಟಕ ದಲ್ಲಿ ಕೇವಲ ಒಂಬತ್ತು ಸ್ಥಾನಗಳನ್ನು ಮಾತ್ರ ಗೆದ್ದಿದೆ.

ಹಾಗಾಗಿ ಇಲ್ಲಿ ನಿರೀಕ್ಷಿತ ಗೆಲುವು ಪಡೆಯಲು ಉಚಿತ ಭಾಗ್ಯಗಳೂ ಕೈಗೂಡಲಿಲ್ಲ ಎಂಬುದು ಹಲವು ಕಾಂಗ್ರೆಸ್ ಮುಖಂಡರ ಅಭಿಪ್ರಾಯ. ಅಲ್ಲದೆ ಯೋಜನೆಗಳು ಕಾರ್ಯರೂಪಕ್ಕೆ ಬರುತ್ತಿಲ್ಲ ಎಂದು ಕಾಂಗ್ರೆಸ್ ಪಕ್ಷದ ಹಲವು ಮುಖಂಡರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ ಮತ್ತು ಮುಂದಿನ ದಿನಗಳಲಿ ಈ ಯೋಜನೆ ತೆಗೆದುಹಾಕಬೇಕು ಎಂಬ ಅಪಸ್ವರ ಕೇಳುತ್ತಿದ್ದು, ಈಗ ಈ ಬಗ್ಗೆ ಮಾಧ್ಯಮಗಳಲ್ಲಿ ಮುಕ್ತವಾಗಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಹೀಗಾಗಿ ಈ ಯೋಜನೆಗಳು ನಿಲ್ಲುವ ಆತಂಕ ಜನರಲ್ಲೂ ಮೂಡಿದೆ.

ಸದ್ಯ ಈ ಕುರಿತು ಮಾತನಾಡಿರುವ ಗೃಹ ಸಚಿವರು ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಮತ್ತು ಯಾವುದೇ ಊಹಾಪೋಹಗಳಿಗೆ ಕಿವಿಗೊಡುವ ಅಗತ್ಯವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಒಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ನ ಐದು ಖಾತ್ರಿ ಯೋಜನೆಗಳು ಅರ್ಧಕ್ಕೆ ನಿಲ್ಲುತ್ತೆ
ಎಂದುಕೊಂಡಿದ್ದ ಜನಸಾಮಾನ್ಯರು ಈ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಎಂದು ಗೃಹ ಸಚಿವರು ಮಾಧ್ಯಮದಲ್ಲಿ ತಿಳಿಸಿದ್ದಾರೆ.

Bank Of Baroda: ಒಂದು ಬ್ಯಾಂಕ್ ಅಕೌಂಟ್ ಇದ್ದರೆ ಸಾಕು! 10 ಲಕ್ಷ ರೂಪಾಯಿಗಳವರೆಗೆ ಪರ್ಸನಲ್ ಲೋನ್ ಪಡೆಯಿರಿ!

You may also like

Leave a Comment