Home » Kodi Sri: ಸಿದ್ದರಾಮಯ್ಯ ಸರ್ಕಾರಕ್ಕೆ ಕಂಟಕ ಇದೆಯೇ? ಸ್ಪೋಟಕ ಭವಿಷ್ಯ ನೀಡಿದ ಕೋಡಿಮಠ ಶ್ರೀಗಳು!

Kodi Sri: ಸಿದ್ದರಾಮಯ್ಯ ಸರ್ಕಾರಕ್ಕೆ ಕಂಟಕ ಇದೆಯೇ? ಸ್ಪೋಟಕ ಭವಿಷ್ಯ ನೀಡಿದ ಕೋಡಿಮಠ ಶ್ರೀಗಳು!

0 comments
Kodi Sri

Kodi Sri: ರಾಜಕೀಯ, ಸಾಮಾಜಿಕ, ಆರ್ಥಿಕತೆ ಹೀಗೆ ಪ್ರಪಂಚದ ಆಗು ಹೋಗುಗಳ ಬಗ್ಗೆ ಕೋಡಿಮಠದ ಶ್ರೀಗಳ ಮಾತುಗಳು ಭವಿಷ್ಯದ ಸೂಚನೆಗಳನ್ನು ನೀಡುವಲ್ಲಿ ಈಗಾಗಲೇ ಬಲವಾದ ನಂಬಿಕೆ ಸತ್ಯವಾಗಿದೆ.

Vaishnavi Gowda: ಡೀಪ್ ಫೇಕ್ ಜಾಲದಲ್ಲಿ ಸಿಕ್ಕಿಕೊಂಡ ವೈಷ್ಣವಿ ಗೌಡ! ಅಶ್ಲೀಲ ಫೋಟೋ ವೈರಲ್!

ಅಂತೆಯೇ ಪ್ರಕೃತಿ ವಿಕೋಪ, ರಾಜ್ಯ ರಾಜಕಾರಣ, ದೇಶದ ರಾಜಕಾರಣ, ದೇಶ ವಿದೇಶದ ಸಂಘರ್ಷಗಳು, ಬಾಂಬ್ ಸ್ಫೋಟ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಸ್ಫೋಟಕ ಭವಿಷ್ಯ ನುಡಿಯುವ ಕೋಡಿಮಠದ ಡಾ. ಶಿವಯೋಗಿ ಶಿವಾನಂದ ಸ್ವಾಮೀಜಿ (Kodi Sri Shivananda Shivayogi) ಇದೀಗ ಮತ್ತೊಂದು ಸ್ಫೋಟಕ ಭವಿಷ್ಯ ನುಡಿದಿದ್ದಾರೆ.

ಹೌದು, ಲೋಕಸಭಾ ಚುನಾವಣೆಯ ಬಳಿಕ ಕೋಡಿಮಠದ ಶ್ರೀಗಳಾದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯವರು ಸಿದ್ದರಾಮಯ್ಯ ಸರ್ಕಾರದ ಕುರಿತು ಭವಿಷ್ಯ ನುಡಿದಿದ್ದಾರೆ.

ಶಿಷ್ಯರು ಗುರುಗಳಾಗುತ್ತಾರೆ. ಗುರುಗಳು ಶಿಷ್ಯರಾಗುತ್ತಾರೆ, ಹೆಣ್ಣು ಮಕ್ಕಳ ಪ್ರಾಬಲ್ಯ ಹೆಚ್ಚಾಗಲಿದೆ. ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರಕ್ಕೆ ಯಾವುದೇ ಆಪತ್ತು ಇರುವುದಿಲ್ಲ. ಶ್ರಾವಣದಲ್ಲಿ ನಾನು ಮತ್ತೊಂದು ಸ್ಫೋಟಕ ಭವಿಷ್ಯ ಹೇಳುತ್ತೇನೆ. ಕೇಂದ್ರ ಸರ್ಕಾರ ಹಾಗೂ ಮೋದಿ ಅವರ ಬಗ್ಗೆ ಶ್ರಾವಣದಲ್ಲಿ ಮಾತನಾಡುತ್ತೇನೆ ಎಂದು ತಿಳಿಸಿದ್ದಾರೆ.

ಇನ್ನು ದೇಶದಲ್ಲಿ ಕ್ರೋಧಿ ನಾಮ ಸಂವತ್ಸರ ಇದೆ. ಶುಭಗಳಿಗಿಂತ ಅಶುಭಗಳೇ ಹೆಚ್ಚಾಗಿ ನಡೆಯುತ್ತವೆ. ಕ್ರೋಧ, ದ್ವೇಷ, ಮದ, ಅಸೂಯೆಗಳು ಹೆಚ್ಚಾಗುತ್ತವೆ. ಜೊತೆಗೆ ದೇಶದಲ್ಲಿ ಜಲಕಂಟಕ, ಅಗ್ನಿಕಂಟಕ, ವಾಯು ಕಂಟಕಗಳು ನಡೆಯಲಿದೆ. ರಾಜ್ಯದಲ್ಲಿ ಈ ಬಾರಿ ಅತಿವೃಷ್ಟಿ ಸಾಧ್ಯತೆ ಇದೆ ಎಂದು ಕೋಡಿಮಠದ ಶ್ರೀಗಳಾದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯವರು ಭವಿಷ್ಯ ನುಡಿದಿದ್ದಾರೆ.

ಇನ್ನೂ ರೇಣುಕಾಸ್ವಾಮಿ ಕೊಲೆ ಕೇಸ್‌ ನಲ್ಲಿ ದರ್ಶನ್‌ ಅರೆಸ್ಟ್‌ ಆಗಿರುವ ವಿಚಾರವಾಗಿ ಮಾತನಾಡಿದ ಸ್ವಾಮೀಜಿ , ಮನುಷ್ಯ ಸಹನೆ ನೆಮ್ಮದಿ ಕಳೆದುಕೊಂಡಾಗ ಕೋಪಕ್ಕೆ ಶರಣಾಗುತ್ತಾನೆ. ಕೋಪ ಆತನನ್ನೇ ಅಂತ್ಯ ಕ್ಕೆ ಕಾರಣ ಆಗುತ್ತೆ ಅಂತ ಕೋಡಿ ಮಠದ ಶ್ರೀಗಳು ಹೇಳಿದ್ದಾರೆ. ಇನ್ನು ಜಾಗತಿಕ ಮಟ್ಟದಲ್ಲಿ ಮತಾಂಧತೆ ಹೆಚ್ಚಾಗಲಿದೆ. ಬಾಂಬ್ ಸ್ಫೋಟ, ಭೂಕಂಪ ಆಗುವ ಸಾಧ್ಯತೆ ಇದೆ. ಈ ವೇಳೆ ಧಾರ್ಮಿಕ ಮುಖಂಡನ ಸಾವು ಸಹ ಆಗಲಿದ್ದು ಒಟ್ಟಿನಲ್ಲಿ ಈ ಬಾರಿ ಪಂಚಘಾತಕಗಳು ಸಂಭವಿಸಲಿದೆ. ಪಂಚಘಾತುಕಗಳನ್ನ ಗೆಲ್ಲೋದು ಕಷ್ಟ ಎಂದು ಸ್ವಾಮೀಜಿಯವರು ಸ್ಫೋಟಕ ಭವಿಷ್ಯ ನುಡಿದಿದ್ದಾರೆ.

Cleaning Tips: ಬಿಳಿ ಬಟ್ಟೆ ಮೇಲಿನ ಕಲೆ ತೆಗಿಯೋಕೆ ಇಲ್ಲಿದೆ ಸುಲಭ ಉಪಾಯ!

You may also like

Leave a Comment