Home » Madikeri: ನಾಪೋಕ್ಲು ವ್ಯಾಪ್ತಿಯಲ್ಲಿ ಮಳೆ ಹಾನಿ – ಉಸ್ತುವಾರಿ ಸಚಿವರ ಭೇಟಿ

Madikeri: ನಾಪೋಕ್ಲು ವ್ಯಾಪ್ತಿಯಲ್ಲಿ ಮಳೆ ಹಾನಿ – ಉಸ್ತುವಾರಿ ಸಚಿವರ ಭೇಟಿ

0 comments

Madikeri: ಕೊಡಗಿನ ನಾಪೋಕ್ಲು ವ್ಯಾಪ್ತಿಯ ಚೆರಿಯಪರಂಬು ಭಾಗದಲ್ಲಿ ಮಳೆಯಿಂದ ಉಂಟಾಗಿರುವ ಹಾನಿ ಪ್ರದೇಶಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್ ಭೋಸರಾಜು, ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿದರು.

ಪ್ರತಿ ವರ್ಷ ಮಳೆಗಾಲದಲ್ಲಿ ಉಕ್ಕಿ ಹರಿಯುವ ಕಾವೇರಿ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆಯ ಹಾಗೂ ಸುತ್ತಮುತ್ತಲಿನ ಪರಿಸರದ ವೀಕ್ಷಣೆ ಮಾಡಿದ ಶಾಸಕರು, ಅಧಿಕಾರಿಗಳೊಂದಿಗೆ ಸುರಕ್ಷತೆ ಕ್ರಮದ ಬಗ್ಗೆ ಚರ್ಚಿಸಿ ಸಲಹೆ ನೀಡಿದರು.

ಮುಂದಿನ ದಿನಗಳಲ್ಲಿ ಪ್ರವಾಹದಿಂದ ಸಂಪರ್ಕ ಕಡಿತಗೊಳ್ಳುವ ಈ ಸೇತುವೆಯ ಆಸುಪಾಸಿನಲ್ಲಿ ಮುಂಜಾಗ್ರತೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಚರ್ಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಅಧಿಕಾರಿ ವೆಂಕಟ್ ರಾಜಾ, ಜಿ. ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಉಪ ವಿಭಾಗದ ಅಧಿಕಾರಿ ವಿನಾಯಕ ನರ್ವಾಡೆ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಇತರರು ಇದ್ದರು.

ಇದನ್ನೂ ಓದಿ: Kodagu: ಕೊಡಗು ಜಿಲ್ಲಾ ಪಂಚಾಯ್ತಿ ಕೆಡಿಪಿ ಸಭೆ – ನಾಡಗೀತೆಗೆ ಅವಮಾನ..!

You may also like