Heart Attack: ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಅದರಲ್ಲೂ ಇತ್ತಿಚೆಗೆ ಹಾಸನ ಜಿಲ್ಲೆಯಲ್ಲಿ ಬರೋಬ್ಬರಿ 21 ಮಂದಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಈ ಬಗ್ಗೆ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದು, ಈ ಕುರಿತು ತನಿಖೆ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದ್ದರು.
ಇದೀಗ ಜನರ ಬೇಡಿಕೆಯ ಮೇರೆಗೆ ಆರೋಗ್ಯ ಇಲಾಖೆಯಿಂದ ಟೆಕ್ನಿಕಲ್ ಕಮಿಟಿಯನ್ನು ರಚನೆ ಮಾಡಲಾಗಿದೆ. ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದ್ದು, ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕರು, ಜಯದೇವ ಸಂಸ್ಥೆಯ ತಜ್ಞರು ಸೇರಿದಂತೆ 10 ಜನ ತಜ್ಞರ ತಂಡ ರಚನೆ ಮಾಡಲು ಸೂಚನೆ ನೀಡಲಾಗಿದೆ.
ಹಾಸನದಲ್ಲಿ ಆಗುತ್ತಿರುವ ಹೃದಯಾಘಾತದ ಬಗ್ಗೆ ಅಧ್ಯಯನಕ್ಕೆ ಮುಂದುವರೆಸಲಿದ್ದು, ಇಂದು ಸಂಜೆಯೊಳಗೆ ಕಮಿಟಿ ರಚಿಸಿ ಇಲಾಖೆ ಆದೇಶ ಹೊರಡಿಸಲಿದೆ. ಇದೇ ವೇಳೆ ಹಾಸನದ ಹೃದಾಯಘಾತ ಹೆಚ್ಚಾದ ವಿಚಾರವಾಘಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ಅದರ ಬಗ್ಗೆ ಪರಿಶೀಲನೆ ನಡೆಸುತ್ತೇನೆ. ಹೃದಯಘಾತ ಹೆಚ್ಚಾಗಲು ಕಾರಣ ಏನು ಎಂಬುದಕ್ಕೆ ತಜ್ಞರ ಮೂಲಕ ಮಾಹಿತಿ ತರಿಸಿಕೊಳ್ಳುತ್ತೇನೆ. ಅದರ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಖುತ್ತೇನೆ ಎಂದು ಮೈಸೂರಿನಲ್ಲಿ ಉತ್ತರಿಸಿದರು.
