1
Heart Attack: ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವ ಸಂಖ್ಯೆ ಹೆಚ್ಚುತ್ತಿರುವ ನಡುವೆಯೇ ತುಮಕೂರಿನಲ್ಲಿ ಬಿಜೆಪಿ ಯುವ ಮೋರ್ಚಾದ ಮುಖಂಡರೊಬ್ಬರು ನಿಧನ ಹೊಂದಿದ್ದಾರೆ.
ಬಿಜೆಪಿ ಯುವ ಮೋರ್ಚಾದ ಮುಖಂಡ ಹೆಬ್ಬಾಕ ನೀಲಕಂಠಸ್ವಾಮಿ (36) ನಿಧನ ಹೊಂದಿದವರು. ತಮ್ಮ ಮಗಳನ್ನು ಶಾಲೆಗೆ ಬಿಟ್ಟು ಮನೆಗೆ ಬಂದಾಗ ಎದೆನೋವು ಕಾಣಿಸಿಕೊಂಡಿದ್ದು, ತಲೆ ಸುತ್ತು ಬಂದು ಬಿದ್ದಿದ್ದರು. ಕೂಡಲೇ ಅವರನ್ನು ಸಿದ್ದಗಂಗಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಹೆಬ್ಬಾಕ ನೀಲಕಂಠಸ್ವಾಮಿ ಸಾವಿಗೀಡಾಗಿದ್ದಾರೆ.
ಈ ಘಟನೆ ಹೊಸ ಬಡವಾಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇದನ್ನೂ ಓದಿ: Kodagu: ಕೊಡಗು ಜಿಲ್ಲೆಯ ಮಳೆ ವಿವರ!
