Home » Udupi: ಶರಣ್ ಪಂಪವೆಲ್ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲು!

Udupi: ಶರಣ್ ಪಂಪವೆಲ್ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲು!

0 comments
Sharan Pumpwell Case

Udupi: ಮಾಧ್ಯಮದೊಂದಿಗೆ ಮಾತನಾಡುತ್ತಾ ಪ್ರಚೋದನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಶರಣ್ ಪಂಪವೆಲ್‌ ವಿರುದ್ಧ ಉಡುಪಿ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.

ಕುಂಜಾಲುವಿನಲ್ಲಿ ನಡೆದ ಗೋ ಹತ್ಯೆ ಯನ್ನು ಉದ್ದೇಶಿಸಿ ಸಾರ್ವಜನಿಕವಾಗಿ ಧರ್ಮಗಳ ನಡುವೆ ದ್ವೇಷ ಹುಟ್ಟು ಹಾಕುವಂತಹ ಪ್ರಚೋದನಾಕಾರಿ ಹೇಳಿಕೆಯನ್ನು ಮಾಧ್ಯಮದ ಮುಂದೆ ನೀಡಿದ್ದು, ಆರೋಪಿ ಶರಣ್ ಪಂಪ್ ವೆಲ್ ನೀಡಿದ ವಿಡಿಯೋ ವಿವಿಧ ವಾಟ್ಸಪ್ ಗ್ರೂಪ್ ಗಳಿಗೆ ಹರಿಬಿಟ್ಟಿದ್ದು, ಸಾರ್ವಜನಿಕ ಶಾಂತಿ-ಸುವ್ಯವಸ್ಥೆಗೆ ಭಂಗ ತರುವಂತೆ ಪತ್ರಿಕಾಗೋಷ್ಠಿಯಲ್ಲಿ ಪ್ರಚೋದನಾಕಾರಿ ಹೇಳಿಕೆ ನೀಡಿದ ಆರೋಪಿ ಶರಣ್ ಪಂಪವೆಲ್‌ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Mangaluru: ಮಂಗಳೂರು: ಅಣ್ಣನ ಕೋಪದಲ್ಲಿ ಮನೆ ಶೋಕೇಸ್ ಒಡೆದು ರಕ್ತಸ್ರಾವದಿಂದ ಮೃತ್ಯು!

You may also like