Home » Prakash Rai-MB Patil: ಆಂಧ್ರ, ತಮಿಳುನಾಡಿನಲ್ಲೇಕೆ ಬಹುಭಾಷಾ ನಟ ಹೋರಾಡುತ್ತಿಲ್ಲ?: ಎಂಬಿ ಪಾಟೀಲ್‌

Prakash Rai-MB Patil: ಆಂಧ್ರ, ತಮಿಳುನಾಡಿನಲ್ಲೇಕೆ ಬಹುಭಾಷಾ ನಟ ಹೋರಾಡುತ್ತಿಲ್ಲ?: ಎಂಬಿ ಪಾಟೀಲ್‌

by V R
0 comments

Prakash Rai-MB Patil: ಪ್ರಕಾಶ್‌ ರೈ ಅವರು ನಮಗಿಂತ ಆಂಧ್ರದಲ್ಲಿ ಹೆಚ್ಚು ಪ್ರಭಾವಿಗಳು ಮತ್ತು ಜನಪ್ರಿಯರು. ಇವರು ಬೇರೆ ಬೇರೆ ರಾಜ್ಯಗಳಲ್ಲೂ ರೈತರ ಭೂಸ್ವಾಧೀನದ ವಿರುದ್ಧ ಹೋರಾಟ ಮಾಡಿದರೆ ಒಳ್ಳೆಯದು ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್‌ ಅವರು ಮಂಗಳವಾರ ಇಲ್ಲಿನ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಹೇಳಿದ್ದಾರೆ.

ಹೈಟೆಕ್‌ ಡಿಫೆನ್ಸ್‌ ಮತ್ತು ಏರೋಸ್ಪೇಸ್‌ ಪಾರ್ಕಿಗಾಗಿ 1282 ಎಕರೆ ಮಾತ್ರ ಸ್ವಾಧೀನ ಪಡಿಸಿಕೊಳ್ಳಲು ತೀರ್ಮಾನ ಮಾಡಿದ್ದೇವೆ. ಪಕ್ಕದ ಆಂಧ್ರಪ್ರದೇಶದಲ್ಲಿ ಇದೇ ಉದ್ದೇಶಕ್ಕೆಂದು ನಮ್ಮ ಗಡಿಗೇ ಅಂಟಿಕೊಂಡಿರುವ ಮಡಕಶಿರಾದಿಂದ ಪೆನುಗೊಂಡದವರೆಗೆ 10ಸಾವಿರ ಎಕರೆಯನ್ನು ಸ್ವಾಧೀನಪಡಿಸಿಕೊಂಡು ಉಚಿತವಾಗಿ ಕೊಡುವುದಾಗಿ ಹೇಳಲಾಗುತ್ತಿದೆ. ಆಂಧ್ರದಲ್ಲಿ ಬೇರೆ ಬೇರೆ ಕೈಗಾರಿಕಾ ಉದ್ದೇಶಗಳಿಗೆ 45 ಸಾವಿರ ಎಕರೆ ಭೂಮಿಯನ್ನು ಸ್ವಾಧೀನ ಮಾಡಲಾಗಿದೆ. ಇನ್ಫೋಸಿಸ್‌, ಕಾಗ್ನಿಜೆಂಟ್‌, ಟಿಸಿಎಸ್‌ ಮುಂತಾದ 100 ಕಂಪನಿಗಳು ವಿಶಾಖಪಟ್ಟಣದಲ್ಲಿ ಎಕರೆಗೆ 99 ಪೈಸೆಯಂತೆ ಭೂಮಿ ಕೊಡಲಾಗಿದೆ ಎನ್ನುವ ವಿವರ ಮಾಧ್ಯಮಗಳಲ್ಲಿ ಬಂದಿದೆ. ಬಹುಶಃ ಪ್ರಕಾಶ್‌ ರೈಗೆ ಇವು ಕಾಣಿಸುತ್ತಿಲ್ಲವೇ ಎಂದು ಕಿಡಿಕಾರಿದರು.

ಇದನ್ನೂ ಓದಿ: Accident: ಅಮೆರಿಕದಲ್ಲಿ ಕಾರಿಗೆಟ್ರಕ್ ಡಿಕ್ಕಿ: ಭಾರತ ಮೂಲದ ನಾಲ್ವರು ಸಾವು!

You may also like