Home » Puttur: ಪುತ್ತೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿ ಅರೆಸ್ಟ್

Puttur: ಪುತ್ತೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿ ಅರೆಸ್ಟ್

by V R
0 comments

Puttur: ಪುತ್ತೂರು (Puttur) ಹೊರವಲಯದ ನೆಹರು ನಗರದಲ್ಲಿ, ಅಪ್ರಾಪ್ತ ಪ್ರಾಯದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಹಲ್ಲೆ ಮಾಡಿದ ಘಟನೆ ಮಂಗಳವಾರ ನಡೆದಿದೆ.

ಅಪ್ರಾಪ್ತ ಬಾಲಕಿ ಬೆಳಗ್ಗೆ ತನ್ನ ತಾಯಿಯೊಂದಿಗೆ ನೆಹರೂ ನಗರ ಜಂಕ್ಷನ್ ನಲ್ಲಿ ಬಸ್ಸಿಗಾಗಿ ಕಾಯುತ್ತಿದ್ದಾಗ, ಅಪರಿಚಿತ ವ್ಯಕ್ತಿಯೊಬ್ಬ ಬಂದು ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿ ಹಲ್ಲೆ ನಡೆಸಿದ್ದಾನೆ. ಈ ಬಗ್ಗೆ ಸಂತ್ರಸ್ತೆಯ ತಾಯಿ ನೀಡಿದ ದೂರಿನ ಮೇರೆಗೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಅಕ್ರ: 53/2025 : 126(2), 74, 115(2),353(2) BNS 2023, 8 POCSO 2012 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿ, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ: Kerala nurse: ಯೆಮೆನ್‌ನಲ್ಲಿ ಮರಣದಂಡನೆಗೆ ಗುರಿಯಾಗಿರುವ ಕೇರಳ ನರ್ಸ್‌ಗೆ ಜು.16ಕ್ಕೆ ನೇಣು

You may also like