Shakti Yojana: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಶಕ್ತಿ ಯೋಜನೆಯ ಮುಖಾಂತರ ಇದೀಗ 500 ಕೋಟಿ ಮಹಿಳೆಯರು ಫ್ರೀ ಬಸ್ ಪ್ರಯಾಣ ಮಾಡಿದ್ದಾರೆ ಎಂಬ ಸಂತಸದ ಸುದ್ದಿಯನ್ನು ರಾಜ್ಯ ಸರ್ಕಾರ ಹಂಚಿಕೊಂಡಿದೆ. ಈ ಬೆನ್ನಲ್ಲೇ 500ನೇ ಕೋಟಿ ಟಿಕೆಟ್ ಪಡೆದ ಮಹಿಳೆಗೆ ಸಿಎಂ ಸಿದ್ದರಾಮಯ್ಯ ಅವರು ಶಾಲು ಹೊದಿಸಿ ಸನ್ಮಾನ ಮಾಡಿದ್ದಾರೆ.
ಹೌದು, ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಶಕ್ತಿ ಯೋಜನೆಯು ದಿನಾಂಕ 11-06-2023 ರಿಂದ ಜಾರಿಗೆ ಬಂದಿದ್ದು, ಜುಲೈ 14 ನೇ 2025 ಕ್ಕೆ 500 ಕೋಟಿ ಮಹಿಳಾ ಪ್ರಯಾಣಿಕರ ಟ್ರಿಪ್ ಅನ್ನು ತಲುಪುವ ಮುಖಾಂತರ ದೇಶದಲ್ಲೇ ಹೊಸ ಮೈಲಿಗಲ್ಲನ್ನು ತಲುಪಲಿದೆ. ಇದೀಗ 500 ನೇ ಕೋಟಿ ಶಕ್ತಿ ಟಿಕೇಟ್ ಪಡೆದ ಮಹಿಳೆಗೆ ಸಿಎಂ ಸಿದ್ದರಾಮಯ್ಯ ಶಾಲು ಹೊದಿಸಿ, ಹಾರ ಹಾಕಿ ,ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿದರು.
ಇನ್ನು ʼಶಕ್ತಿʼ ಜಾರಿಯಾದ ನಂತರದಿಂದ ಈವರೆಗೆ 500 ಕೋಟಿ ಬಾರಿ ಮಹಿಳೆಯರು ಉಚಿತವಾಗಿ ಸಾರಿಗೆ ಬಸ್‌ಗಳಲ್ಲಿ ಪ್ರಯಾಣ ಮಾಡಿದ್ದು, ಈವರೆಗಿನ ಒಟ್ಟು ಟಿಕೆಟ್ ಮೌಲ್ಯ 12 ಸಾವಿರ ಕೋಟಿ ರೂ. ದಾಟಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.
ಇದನ್ನೂ ಓದಿ: Kerala: ಯೆಮೆನ್‌ನಲ್ಲಿ ಮರಣದಂಡನೆಗೆ ಗುರಿಯಾಗಿರುವ ನಿಮಿಷಾ ಪ್ರಿಯಾ ಸೇಫ್!
