7
High Court: ಗಾಳಿ ಆಂಜನೇಯಸ್ವಾಮಿ ದೇವಾಲಯವನ್ನು ಸುಪರ್ದಿಗೆ ಪಡೆದು ರಾಜ್ಯ ಮುಜರಾಯಿ ಇಲಾಖೆ ಹೊರಡಿಸಿರುವ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಣೆ ಮಾಡಿದೆ.
ಗಾಳಿ ಆಂಜನೇಯ ದೇವಾಲಯವನ್ನು ಮುಜರಾಯಿ ಇಲಾಖೆ ಸುಪರ್ದಿಗೆ ಪಡೆದಿರುವ ಆದೇಶಕ್ಕೆ ಮಧ್ಯಂತರ ತಡೆ ನೀಡಬೇಕೆಂದು ಕೋರಿ ದೇವಾಲಯದ ಟ್ರಸ್ಟ್ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ಇಂದು ಆದೇಶ ನೀಡಿದೆ. ನ್ಯಾಯಾಲಯವು ಎರಡು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿದೆ ವಿಚಾರಣೆ ಮುಂದೂಡಿದೆ.
ದೇವಾಲಯವನ್ನು ಮುಜರಾಯಿ ಇಲಾಖೆಯ ಸುಪರ್ದಿಗೆ ಪಡೆಯಲಾಗಿದ್ದು, ಆ ಆದೇಶಕ್ಕೆ ತಡೆಯಾಜ್ಞೆ ನೀಡಬಾರದು ಎಂದು ಸರಕಾರದ ಪರ ವಾದ ಮಂಡನೆ ಮಾಡಲಾಗಿದೆ. ವಾದ ಆಲಿಸಿದ ಹೈ ಕೋರ್ಟ್ ಇದೀಗ ವಿಚಾರಣೆ ಮುಂದೂಡಿ ಆದೇಶ ನೀಡಿದೆ.
ಇದನ್ನೂ ಓದಿ: Multiplex: ರಾಜ್ಯ ಸರ್ಕಾರದಿಂದ ಮಲ್ಟಿಪ್ಲೆಕ್ಸ್‌ಗೆ ಮೂಗುದಾರ- ಫಿಕ್ಸ್ ಆಯ್ತು 200 ಟಿಕೆಟ್ ದರ!!
