Home » Lucknow: ಪ್ರಾಧ್ಯಾಪಕರ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ

Lucknow: ಪ್ರಾಧ್ಯಾಪಕರ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ

0 comments

Lucknow: ಪ್ರಾಧ್ಯಾಪಕರ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಉತ್ತರ ಪ್ರದೇಶದ ಗ್ರೇಟರ್‌ ನೋಯ್ಡಾದಲ್ಲಿ ನಡೆದಿದೆ.

ಜ್ಯೋತಿ ಶರ್ಮಾ (20) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.

ಜ್ಯೋತಿ ಗ್ರೇಟರ್‌ ನೋಯ್ಡಾದ ಶಾರದಾ ವಿಶ್ವವಿದ್ಯಾಲಯದಲ್ಲಿ ಮೂರನೇ ವರ್ಷದ ಬಿಡಿಎಸ್‌ (ಡೆಂಟಲ್‌) ಕೋರ್ಸ್‌ ವ್ಯಾಸಂಗ ಮಾಡುತ್ತಿದ್ದು, ತನ್ನ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ ಮಾಡಿರುವ ಘಟನೆ ನಡೆದಿದೆ. ತನ್ನ ಸಾವಿಗೆ ಶಿಕ್ಷಕರಿಂದ ಆಗುತ್ತಿದ್ದ ಕಿರುಕುಳವೇ ಕಾರಣ ಎಂದು ಡೆತ್‌ನೋಟಲ್ಲಿ ಬರೆದಿರುವ ಕುರಿತು ವರದಿಯಾಗಿದೆ.

ಶಾರದಾ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಈ ಘಟನೆ ಕುರಿತು ತೀವ್ರ ದುಃಖ ವ್ಯಕ್ತಪಡಿಸಿದ್ದು, ಪೊಲೀಸರಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದೆ.

ಇದನ್ನೂ ಓದಿ: KMF: ನಂದಿನಿ ಹಾಲಿನ ಪ್ಯಾಕೆಟ್ ಗೆ ಹೊಸ ರೂಪ – ಇದರ ಹಿಂದಿದೆ ಸಾಕಷ್ಟು ವಿಶೇಷತೆ!!

You may also like