Home » Bengaluru: ಇನ್ಮುಂದೆ ಆಸ್ತಿಗಳ ಡಿಜಿಟಲ್ ದಾಖಲೆಗಳು ನಾಡ ಕಚೇರಿಯಲ್ಲೂ ಸಿಗಲಿದೆ: ಕಂದಾಯ ಸಚಿವ ಕೃಷ್ಣಭೈರೇ ಗೌಡ

Bengaluru: ಇನ್ಮುಂದೆ ಆಸ್ತಿಗಳ ಡಿಜಿಟಲ್ ದಾಖಲೆಗಳು ನಾಡ ಕಚೇರಿಯಲ್ಲೂ ಸಿಗಲಿದೆ: ಕಂದಾಯ ಸಚಿವ ಕೃಷ್ಣಭೈರೇ ಗೌಡ

0 comments

Bengaluru: ಆಸ್ತಿ ಮಾಲೀಕರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಿದ್ದು, ಇನ್ನುಮುಂದೆ ನಾಡ ಕಚೇರಿಯಲ್ಲೂ ಆಸ್ತಿ ಡಿಜಿಟಲ್ ದಾಖಲೆಗಳು ಸಿಗಲಿವೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

ಆಸ್ತಿ ದಾಖಲೆಗಳಿಗಾಗಿ ಜನರು ಅಲೆದಾಡುವುದನ್ನು ತಪ್ಪಿಸಲು ನಮ್ಮ ಸರ್ಕಾರ ಜಾರಿಗೆ ತಂದಿರುವ ಭೂ ಸುರಕ್ಷಾ ಯೋಜನೆಯಡಿ ಆಸ್ತಿ ದಾಖಲೆಗಳನ್ನು ಡಿಜಟಲೀಕರಣ ಮಾಡಿ ಆನ್‌ಲೈನ್ ಮೂಲಕ ವಿತರಿಸಲಾಗುತ್ತಿದೆ. ಆಸ್ತಿಗಳ ಡಿಜಿಟಲ್‌ ದಾಖಲೆಗಳು ಹೋಬಳಿ ಮಟ್ಟದಲ್ಲಿರುವ ನಾಡಕಚೇರಿಗಳಲ್ಲೂ ಲಭ್ಯವಿರುತ್ತವೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಗೊತ್ತಿಲ್ಲದವರಿಗೂ ಡಿಜಿಟಲ್ ದಾಖಲೆಗಾಗಿ ನಾಡ ಕಚೇರಿಗಳಲ್ಲಿನ ಅಟಲ್‌ ಜನಸ್ನೇಹಿ ಕೇಂದ್ರಗಳಲ್ಲಿಯೂ ಅರ್ಜಿಕೇಂದ್ರಗಳಲ್ಲಿಯೂ ಅರ್ಜಿ ಸಲ್ಲಿಸಬಹುದಾದ ವ್ಯವಸ್ಥೆಮಾಡಲಾಗಿದೆ. ಜನ ಈ ಕೇಂದ್ರಗಳಿಗೆ ಭೇಟಿ ನೀಡಿ ನೇರವಾಗಿ ದಾಖಲೆ ಪಡೆಯಬಹುದು ಎಂದುಕಂದಾಯ ಸಚಿವ ಕೃಷ್ಣಭೈರೇ ಗೌಡ ಹೇಳಿದ್ದಾರೆ.

ಇದನ್ನೂ ಓದಿ: Air India Crash: ಏರ್ತ ಇಂಡಿಯಾ ಅಪಘಾತದ ಬಗ್ಗೆ ಹಲವು ಸಿದ್ಧಾಂತಗಳು ಹರಿದಾಡುತ್ತಿವೆ – ತನಿಖಾ ಪ್ರಕ್ರಿಯೆ ಗೌರವಿಸಿ -ವಿಮಾನಯಾನ ಸಚಿವ

You may also like