Home » Weather Report: ಕರ್ನಾಟಕದ ಹವಾಮಾನ ವರದಿ : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ

Weather Report: ಕರ್ನಾಟಕದ ಹವಾಮಾನ ವರದಿ : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ

0 comments

Weather Report: ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.

ಈಗಿನಂತೆ ಆಗಸ್ಟ್ 8ರ ತನಕ ಗುಡುಗು ಸಹಿತ ಮಳೆ ಮುಂದುವರಿಯುವ ಸೂಚನೆಗಳಿವೆ. 6 ಮತ್ತು 7ರಂದು ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಆಗಸ್ಟ್ 8ರ ತನಕ ಗುಡುಗು ಮಳೆ ಮುಂದುವರಿಯುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ ಒಂದೆರಡು ಕಡೆ, ಧಾರವಾಡ, ಹಾವೇರಿ, ಗದಗ, ವಿಜಯನಗರ, ದಾವಣಗೆರೆ, ಬಳ್ಳಾರಿ, ಕೊಪ್ಪಳ ರಾಯಚೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ತುಮಕೂರು ಹಾಗೂ ಬೆಂಗಳೂರು ಗ್ರಾಮಾಂತರ ಮತ್ತು ನಗರ ಪ್ರದೇಶಗಳಲ್ಲಿ ಭಾರಿ ಮಳೆಯ ಮುನ್ಸೂಚೆನೆ ಇದೆ. ಈಗಿನಂತೆ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಬಹುತೇಕ ಜಿಲ್ಲೆಗಳಲ್ಲಿ ಆಗಸ್ಟ್ 8ರ ತನಕ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಕೆರಳ ಹಾಗೂ ತಮಿಳುನಾಡು ದಕ್ಷಿಣ ಭಾಗದಲ್ಲಿ ಸಣ್ಣ ಮೇಲ್ಮೈ ಸುಳಿಗಾಳಿ ಉಂಟಾಗಿದ್ದರಿಂದ ಕೇರಳದಲ್ಲಿ ಭಾರಿ ಮಳೆಯ ಮುನ್ಸೂಚೆನೆ ಇದೆ. ಈಗಿನ ಲೆಕ್ಕಾಚಾರದ ಪ್ರಕಾರ ತಿರುಗುವಿಕೆಯು ಕೇರಳ ಕರಾವಳಿ ಮೂಲಕ ಉತ್ತರಕ್ಕೆ ಚಲಿಸುವ ಸಾಧ್ಯತೆಗಳಿದ್ದುದರಿಂದ ಆಗಸ್ಟ್ 6 ಹಾಗೂ 7ರಂದು ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯ ಮುನ್ಸೂಚನೆ ಇದೆ.

ಭೂ ಮಧ್ಯ ರೇಖೆಗಿಂತ ಕೆಳಗೆ ಹಿಂದೂ ಮಹಾಸಾಗರದಲ್ಲಿ ಎರಡು ವಾಯುಭಾರ ಕುಸಿತ ಉಂಟಾಗಿದ್ದರ ಪರಿಣಾಮದಿಂದ ಮುಂಗಾರು ದುರ್ಬಲತೆ ಮುಂದುವರಿಯಲಿದ್ದು, ಬಂಗಾಳಕೊಲ್ಲಿಯ ಗಾಳಿಯ ಪ್ರಭಾವದಿಂದ ರಾಜ್ಯದಲ್ಲಿ ಆಗಸ್ಟ್ 8ರ ತನಕ ಗುಡುಗು ಸಹಿತ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.

ಇದನ್ನೂ ಓದಿ: Al God father: ‘ಅವು ನಿಯಂತ್ರಣಕ್ಕೆ ಸಿಗದಿರಬಹುದು’ – ಚಾಟ್‌ಬಾಟ್‌ಗಳ ಬಗ್ಗೆ ಎಚ್ಚರಿಕೆ ನೀಡಿದ AI ಗಾಡ್‌ಫಾದ‌ರ್

You may also like