KSRTC: ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯದ ಸಾರಿಗೆ ನೌಕರರು ಸರ್ಕಾರದ ವಿರುದ್ಧ ನಿರ್ದಿಷ್ಟ ಅವಧಿ ಮುಷ್ಕರವನ್ನು ಕೈಗೊಂಡಿದ್ದು, ಇಡೀ ರಾಜ್ಯದಲ್ಲಿ ಪ್ರಯಾಣದ ವ್ಯತ್ಯಯ ಉಂಟಾಗಿದೆ. ಇದೀಗ ಸಾರಿಗೆ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ಗೆ ಸಲ್ಲಿಸಲಾಗಿದ್ದಂತ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಇಂದು ವಿಚಾರಣೆ ನಡೆಸಲಾಗಿದ್ದು, ವಾದ-ಪ್ರತಿವಾದವನ್ನು ಆಲಿಸಿದಂತ ಹೈಕೋರ್ಟ್ ನ್ಯಾಯಪೀಠವು ಸಾರಿಗೆ ನೌಕರರ ಮುಷ್ಕರಕ್ಕೆ ಮತ್ತೆ ಎರಡು ದಿನ ಬ್ರೇಕ್ ಹಾಕಿದೆ.
ಅರ್ಜಿ ವಿಚಾರಣೆ ವೇಳೆ ಮುಷ್ಕರದಿಂದಾಗಿ ಜನಸಾಮಾನ್ಯರಿಗೆ ತೊಂದರೆಯಾಗಿದೆ ಎಂದು ಎಜಿ ಕೋರ್ಟ್ ಗಮನಕ್ಕೆ ತಂದರು. ಈ ಸಂದರ್ಭದಲ್ಲಿ ಹೈಕೋರ್ಟ್ ನ್ಯಾಯಪೀಠವು ರಾಜಿ ಸಂಧಾನದ ಮಾತುಕತೆ ಏನಾಗಿದೆ ಎಂಬುದಾಗಿ ಪ್ರಶ್ನಿಸಿತು. ಇಲ್ಲಿಯವರೆಗೆ ನಡೆಸ ಮಾತುಕತೆ ವಿವರಗಳನ್ನು ಎಜೆ ಹೈಕೋರ್ಟ್ ನ್ಯಾಯಪೀಠಕ್ಕೆ ನೀಡಿದರು. ಅಲ್ಲದೇ ಇಂಡಸ್ಟ್ರಿಯಲ್ ಡಿಸ್ಪ್ಯೂಟ್ ಕಾಯ್ದೆಯಂತೆ ಸಂಧಾನಸಭೆ ನಡೆಸಲಾಗ್ತಿದೆ ಎಂಬುದಾಗಿ ತಿಳಿಸಿದರು.
ಅಲ್ಲದೆ ಇಂದು ಮುಷ್ಕರ ನಿಲ್ಲಿಸುವಂತೆ ಆದೇಶದ ನಡುವೆಯೂ ಸಾರಿಗೆ ಸಂಚಾರ ಸ್ಥಗಿತಗೊಳಿಸಿದ್ದಕ್ಕೆ ಸಿಜೆ ವಿಭು ಬಕ್ರು, ನ್ಯಾಯಮೂರ್ತಿ ಸಿ ಎಂ ಜೋಶಿ ಅವರಿದ್ದ ಹೈಕೋರ್ಟ್ ನ್ಯಾಯಪೀಠವು ಕೆಂಡಾಮಂಡಲವಾಯಿತು. ಅಲ್ಲದೆ ಈ ವಾದ-ಪ್ರತಿವಾದವನ್ನು ಆಲಿಸಿದಂತ ಹೈಕೋರ್ಟ್, ಮುಷ್ಕರಕ್ಕೆ ನೀಡಿದ್ದಂತ ತಡೆಯಾಜ್ಞೆಯನ್ನು 2 ದಿನ ವಿಸ್ತರಣೆ ಮಾಡಿ ಆದೇಶಿಸಿದೆ.
ಇದನ್ನು ಓದಿ: KSRTC : ಕೆಲವೆಡೆ ಪೊಲೀಸ್ ಭದ್ರತೆಯಲ್ಲಿ ಬಸ್ ಸಂಚಾರ – ಎಸ್ಕಾರ್ಟ್ ವ್ಯವಸ್ಥೆ
