2
Dharmasthala: ಧರ್ಮಸ್ಥಳ ತಲೆಬುರುಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಾಕ್ಷಿದಾರನಾಗಿ ಬಂದಿರುವ ಮಾಸ್ಕ್‌ಮ್ಯಾನ್ ಗನ್‌ಮ್ಯಾನ್ ಭದ್ರತೆಯನ್ನು ಕೇಳಿದ್ದಾರೆ ಎಂದು ವರದಿಯಾಗಿದೆ.
ಧರ್ಮಸ್ಥಳದಲ್ಲಿ ಬುಧವಾರ ನಡೆದ ಘರ್ಷಣೆಯಲ್ಲಿ ದೂರುದಾರನಿಂದ ಈ ಮನವಿ ಬಂದಿದೆ ಎನ್ನಲಾಗಿದೆ. ನನ್ನ ಮೇಲೂ ದಾಳಿ ಮಾಡುವ ಸಾಧ್ಯತೆ ಇರುವುದರಿಂದ ಗನ್‌ಮ್ಯಾನ್ ನೀಡಬೇಕೆಂದು ಮನವಿ ಮಾಡಿದ್ದಾನೆ.
ಗುರುವಾರ ವಿಚಾರಣೆ ನಡೆದ ಸಂದರ್ಭದಲ್ಲಿ ದೂರುದಾರನ ಪರ ವಕೀಲರು ವಿಶೇಷ ತನಿಖಾ ತಂಡಕ್ಕೆ ಗನ್‌ಮ್ಯಾನ್ ನೀಡಲು ಲಿಖಿತ ಮನವಿ ಮಾಡಿದ್ದಾರೆ ಎಂದು ವರದಿಯಾಗಿದೆ. ಎಸ್‌ಐಟಿ ಎಸ್‌ಪಿ ಜಿತೇಂದ್ರ ದಯಾಮ್ ಮುಂದೆ ಒತ್ತಾಯ ಮಾಡಿದ್ದಾನೆ.
ಬೆಳ್ತಂಗಡಿಯ ಎಸ್‌ಐಟಿ ಕಚೇರಿಗೆ ದೂರುದಾರ ಆಗಮಿಸಿದ್ದು, ದೂರುದಾರ ಆಗಮಿಸಿದ ಖಾಸಗಿ ಕಾರಿನ ಮುಂದೆ ಪೊಲೀಸರು ಕಾವಲು ಕಾಯುತ್ತಿದ್ದು, ಪೊಲೀಸ್ ವಾಹನದಲ್ಲಿದ್ದ ಚಾಲಕ ಸಹಿತ ಇಬ್ಬರು ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿರುವ ಕುರಿತು ವರದಿಯಾಗಿದೆ.
