3
Weather report: ರಾಜ್ಯದಲ್ಲಿ ಮಳೆರಾಯನ ಆರ್ಭಟ ಮುಂದುವರೆಯಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಲ್ಲಿ ಇಂದು ಕೂಡ ಮಳೆಯ ಮುನ್ನೆಚ್ಚರಿಕೆ ನೀಡಿದ್ದು, ರಾಜ್ಯದ ಬಹುತೇಕ ಕಡೆ ಇಂದು ಮಳೆಯಾಗುವ ಸಾಧ್ಯತೆ ಎಂದು ಇಲಾಖೆ ಹೇಳಿದೆ.
ಬೆಂಗಳೂರು, ಬೆಂ. ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಧಾರವಾಡ, ಹಾವೇರಿ, ಶಿವಮೊಗ್ಗ, ಗದಗ, ಬೆಳಗಾವಿ, ಬಾಗಲಕೋಟೆ, ಕಲ್ಬುರ್ಗಿ ಸೇರಿದಂತೆ ಹಲವೆಡೆ ಮಳೆಯ ಮುನ್ಸೂಚನೆ ಇದೆ.
ನಾಳೆಯಿಂದ ಮತ್ತೆ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದ್ದು, ನಾಳೆ ಎಲ್ಲಾ ಜಿಲ್ಲೆಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆಯಿಂದ ಮಾಹಿತಿ ಹೊರಬಿದ್ದಿದೆ.
Bantwala: ಬಂಟ್ವಾಳ: ಸ್ಮಶಾನದಲ್ಲಿ ಲಕ್ಷಾಂತರ ರೂ ಮೌಲ್ಯದ ಸೊತ್ತುಗಳ ಕಳ್ಳತನ!!
