Home » Dharmasthala: ಧರ್ಮಸ್ಥಳ ಪ್ರಕರಣ- SIT ಕಚೇರಿಗೆ ಇಬ್ಬರು ಹೊಸ ದೂರುದಾರರ ಆಗಮನ!!

Dharmasthala: ಧರ್ಮಸ್ಥಳ ಪ್ರಕರಣ- SIT ಕಚೇರಿಗೆ ಇಬ್ಬರು ಹೊಸ ದೂರುದಾರರ ಆಗಮನ!!

0 comments

Dharmasthala : ಧರ್ಮಸ್ಥಳದಲ್ಲಿ ಶವಗಳನ್ನು ಹೂತಿದ್ದಾಗಿ ಮಾಸ್ಕ್ ಮ್ಯಾನ್ ದೂರು ವಿಚಾರ ಸಂಬಂಧ ಇದೀಗ ಬೆಳ್ತಂಗಡಿ ಎಸ್ ಐಟಿ ಕಚೇರಿಗೆ ಮತ್ತಿಬ್ಬರು ಸಾಕ್ಷಿದಾರರು ಆಗಮಿಸಿದ್ದಾರೆ.

ಧರ್ಮಸ್ಥಳದಲ್ಲಿ ಶವಗಳನ್ನು ಹೂತಿದ್ದಾಗಿ ಹೇಳಿದ್ದ ಅನಾಮಿಕ ದೂರುದಾರ ಪರಿಚಯ ತಮಗೆ ಇರುವುದಾಗಿ ಹೇಳಿದ್ದ ಧರ್ಮಸ್ಥಳ ಗ್ರಾಮದ ನಿವಾಸಿಗಳಾದ ಪುರಂದರ ಗೌಡ ಹಾಗೂ ತುಲಾರಾಮ ಗೌಡ ಇಂದು ಹೇಳಿಕೆ ದಾಖಲಿಸಲು ಎಸ್ ಐಟಿ ಕಚೇರಿಗೆ ಆಗಮಿಸಿದ್ದಾರೆ.

ಎಸ್.ಐ.ಟಿ ಕಚೇರಿಗೆ ಆಗಮಿಸುವ ವೇಳೆ ಮಾಧ್ಯಮ ದವರೊಂದಿಗೆ ಮಾತನಾಡಿದ ಪುರಂದರ ಗೌಡ, ನೇತ್ರಾವತಿ ಸ್ನಾನಘಟ್ಟದಲ್ಲಿ ನನ್ನ ಅಂಗಡಿಯಿತ್ತು. ಅಲ್ಲಿದ್ದ ವೇಳೆ ಮೃತದೇಹಗಳನ್ನು ಹೂತು ಹಾಕುವುದನ್ನು ನೋಡಿದ್ದೇನೆ. ಇದೇ ವ್ಯಕ್ತಿ ಇರಬಹುದು ಅಂತ ಅನಿಸುತ್ತಿದೆ. ಒಂದಕ್ಕಿದ ಹೆಚ್ಚು ಜನರು ಸೇರಿ ಮೃತದೇಹಗಳನ್ನು ಹೂತು ಹಾಕುವುದನ್ನು ನೋಡಿದ್ದೇವೆ. ಸಾಕ್ಷಿ ದೂರುದಾರ ತೋರಿಸಿದ ಒಂದನೆಯ ಸ್ಥಳದಲ್ಲಿ ಹಾಗೂ 13ನೆಯ ಸ್ಥಳದಲ್ಲಿ ಮೃತದೇಹಗಳನ್ನು ಹೂತು ಹಾಕುವುದನ್ನು ನೋಡಿರುವುದಾಗಿ ತಿಳಿಸಿದ್ದಾರೆ.

ಮತ್ತೋರ್ವ ವ್ಯಕ್ತಿ ತಾನು ಸಾಕ್ಷಿದೂರುದಾರ ತೋರಿಸಿದ ಸ್ಥಳವಲ್ಲದೆ ಬೇರೆ ಸ್ಥಳಗಳಲ್ಲಿ ಮೃತದೇಹಗಳನ್ನು ಹೂತು ಹಾಕಿರುವುದನ್ನು ನೋಡಿದ್ದು, ಈಬಗ್ಗೆ ಎಸ್.ಐ.ಟಿ ಮುಂದೆ ಹೆಚ್ಚಿನ ಮಾಹಿತಿಗಳನ್ನು ನೀಡುವುದಾಗಿ ತಿಳಿಸಿದ್ದಾರೆ.

Akka Pade: ಮಹಿಳೆಯರ ರಕ್ಷಣೆಗೆ ಬರಲಿದೆ ಅಕ್ಕ ಪಡೆ: ಲಕ್ಷ್ಮಿ ಹೆಬ್ಬಾಳ್ಕರ್

You may also like