Home » MUDA case: ಪಾರ್ವತಿ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್ ಸಮನ್ಸ್ – ಅಪಾಯಿಂಟ್‌ಮೆಂಟ್ ತೆಗೊಂಡು ಬನ್ನಿ ಎಂದ ಸಿಎಂ ಭದ್ರತಾ ಅಧಿಕಾರಿಗಳು

MUDA case: ಪಾರ್ವತಿ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್ ಸಮನ್ಸ್ – ಅಪಾಯಿಂಟ್‌ಮೆಂಟ್ ತೆಗೊಂಡು ಬನ್ನಿ ಎಂದ ಸಿಎಂ ಭದ್ರತಾ ಅಧಿಕಾರಿಗಳು

0 comments

MUDA Case: ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಮನವಿ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಅವರಿಗೆ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಆದರೆ ಸಮನ್ಸ್ ಪಡೆ ಯಲು ಅಪಾಯಿಂಟ್‌ಮೆಂಟ್ ತೆಗೆದು ಕೊಂಡು ಬನ್ನಿ ಎಂದು ಸಿದ್ದರಾಮಯ್ಯ ಅವರ ಮನೆಯ ಭದ್ರತೆಗೆ ನಿಯೋ ಜಿಸಿರುವ ಪೊಲೀಸ್ ಅಧಿಕಾರಿಗಳು ಸಲಹೆ ನೀಡಿದ್ದಾರೆ.

ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಸ್ನೇಹಮಯಿ ಕೃಷ್ಣ ಅವರು ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಈ ಸಂಬಂಧ ಹೈಕೋರ್ಟ್ ಮುಖ್ಯ ನ್ಯಾಯ ಮೂರ್ತಿ ನೇತೃತ್ವದ ವಿಭಾಗೀಯ ಪೀಠದಲ್ಲಿ ಈ ಬಗ್ಗೆ ವಿಚಾರಣೆ ನಡೆಯುತ್ತಿದೆ. ಜುಲೈ 10 ರಂದು ನಡೆದ ವಿಚಾರಣೆ ವೇಳೆ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವ ಬಗ್ಗೆ ಖದ್ದು ಹಾಜರಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಬೇಕು. ಇಲ್ಲವೇ ನಿಮ್ಮ ವಕೀಲರಿಂದ ಅಭಿಪ್ರಾಯ ತಿಳಿಸಿ ಎಂದು ಹೈಕೋರ್ಟ್ ಪಾರ್ವತಿ ಅವರಿಗೆ ಸಮನ್ಸ್ ನೀಡಿದೆ.

ಈ ಸಂಬಂಧ ಇಂದು ನಮ್ಮ ವಕೀಲರ ಮೂಲಕ ಸಮನ್ಸ್ ಜಾರಿ ಮಾಡಲು ಬೆಂಗಳೂರಿನ ವಿಜಯನಗರದ ಸಿದ್ದರಾಮಯ್ಯ ಅವರ ಮನೆಗೆ ಹೋಗಿದ್ದೆವು. ಆದರೆ ಪಾರ್ವತಿ ಅವರು ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ವಾಸವಾಗಿದ್ದಾರೆ. ಅಲ್ಲಿಗೆ ಹೋಗಿ ಎಂದು ಸಲಹೆ ನೀಡಿದರು ಎಂದು ಸ್ನೇಹಮಯಿ ಕೃಷ್ಣ ತಿಳಿಸಿದರು.

ತರುವಾಯ ಕಾವೇರಿ ನಿವಾಸಕ್ಕೆ ಹೋದಾಗ ಪಾರ್ವತಿ ಅವರು ಮನೆಯಲ್ಲಿ ಇಲ್ಲ ಎಂದು ಭದ್ರತೆಗೆ ನಿಯೋಜನೆ ಗೊಂಡಿದ್ದ ಪೊಲೀಸ್ ಇನ್ಸ್ ಪೆಕ್ಟರ್ ತಿಳಿಸಿದರು. ಇದು ಕೋರ್ಟ್ ಸಮನ್ಸ್ ಆಗಿರುವ ಕಾರಣ ಅವರನ್ನು ಖದ್ದು ಭೇಟಿ ಮಾಡಿ ನೀಡಬೇಕು ಎಂದು ತಿಳಿಸಿದ್ದೆವು. ಪಾರ್ವತಿ ಅವರನ್ನು ಭೇಟಿ ಮಾಡಬೇಕೆಂದು ಅಪಾಯಿಂಟ್‌ಮೆಂಟ್ ತೆಗೆದುಕೊಳ್ಳಬೇಕು ಎಂದು ಇನ್ಸ್‌ಪೆಕ್ಟರ್ ಹೇಳಿದರು.

ಎಂತಹ ಪ್ರಭಾವಿಯಾದರೂ ಕೋರ್ಟ್ ಸಮನ್ಸ್ ನೀಡಲು ಅಪಾಯಿಂಟ್‌ಮೆಂಟ್ ತೆಗೆದುಕೊಳ್ಳುವ ನಿಯಮ ಇಲ್ಲ. ಆದ ಕಾರಣ ಸೆಪ್ಟೆಂಬರ್ 4 ರಂದು ನಡೆಯುವ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಗಳ ನೇತೃತ್ವದ ವಿಭಾಗೀಯ ಪೀಠಕ್ಕೆ ಈ ವಿಚಾರವನ್ನು ಅಫಿಡವಿಟ್ ಮೂಲಕ ತಿಳಿಸುತ್ತೇವೆ ಎಂದು ಸ್ನೇಹಮಯಿ ಕೃಷ್ಣ ತಿಳಿಸಿದರು.Dharmasthala Case: ಧರ್ಮಸ್ಥಳ ಪ್ರಕರಣದ ತನಿಖೆಯ ಬಗ್ಗೆ ಸದನದಲ್ಲಿ ಚರ್ಚೆ ಹಿನ್ನೆಲೆ – ಗೃಹ ಸಚಿವ ಭೇಟಿಯಾದ ಎಸ್ಐಟಿ ಮುಖ್ಯಸ್ಥ ಮೊಹಾಂತಿ

You may also like