7
pavithra gowda arrest: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ (Pavithra Gowda) ಗೆ
ಕೊಲೆ ಕೇಸ್ನಲ್ಲಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಇದರ ಬೆನ್ನಲ್ಲೇ ಬೆಂಗಳೂರಿನ ಆರ್ಆರ್ ನಗರ ನಿವಾಸಕ್ಕೆ ತೆರಳಿದ ಪೊಲೀಸರು, ಆರೋಪಿ ಪವಿತ್ರಳನ್ನು ಬಂಧಿಸಿದ್ದಾರೆ.
ತೀರ್ಪು ಹೊರಬರುತ್ತಿದ್ದಂತೆ ಮನೆಯಲ್ಲಿ ಪವಿತ್ರಾ ಗೌಡ ತಾಯಿ ಎದುರು ಬಿಕ್ಕಳಿಸಿ ಅತ್ತಿದ್ದಾರೆ. ಈ ವೇಳೆ ಮನೆ ಬಳಿ ಪೊಲೀಸರು ಬಂಧನಕ್ಕೆ ಕಾದು ನಿಂತಿದ್ದರು. ಮನೆಯ ಬಾಗಿಲು ತೆರೆದಂತೆ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ.
