Supreme Court: ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ದರ್ಶನ್ ಹಾಗೂ ಇತರ ಆರೋಪಿಗಳ ಜಾಮೀನನ್ನು ರದ್ದುಗೊಳಿಸಿದೆ. ಇದರ ಜೊತೆಗೆ ಜೈಲಿನಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ ನೀಡಿದ್ದ ಜೈಲಾಧಿಕಾರಿಗಳ ಸಸ್ಪೆಂಡ್ ಮಾಡಲು ಆದೇಶಿಸಿದೆ.
ಹೌದು, ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ನಟ ದರ್ಶನ್ ತೂಗುದೀಪ ಅವರ ಸ್ನೇಹಿತೆ ಪವಿತ್ರಾ ಗೌಡ ಸೇರಿದಂತೆ ಏಳು ಮಂದಿಯ ಜಾಮೀನನ್ನು ಸುಪ್ರೀಂ ಕೋರ್ಟ್ ಗುರುವಾರ ರದ್ದು ಮಾಡಿದೆ. ಅದರೊಂದಿಗೆ ಪರಪ್ಪನ ಅಗ್ರಹಾರದಲ್ಲಿ ದರ್ಶನ್‌ಗೆ ರಾಜಾತಿಥ್ಯ ನೀಡಿದ್ದ ಜೈಲು ಅಧಿಕಾರಿಗಳನ್ನು ಸಸ್ಪೆಂಡ್ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.
ಜೈಲಿನಲ್ಲಿ ಕೊಲೆ ಆರೋಪಿಗೆ ವಿಶೇಷ ಆತಿಥ್ಯ ನೀಡಿದ್ದ ವಿಚಾರಕ್ಕೆ ನ್ಯಾಯಪೀಠ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನ್ಯಾಯಮೂರ್ತಿ ಜೆ ಪರ್ದಿವಾಲಾ, ‘ನೀವು ಯಾರಿಗಾದರೂ ವಿಐಪಿ ಅತಿಥ್ಯ ನೀಡಲಾಗುತ್ತಿರುವ ಬಗ್ಗೆ ಛಾಯಾಚಿತ್ರಗಳು ಅಥವಾ ವೀಡಿಯೊವನ್ನು ನಾವು ನೋಡಿದರೆ, ಮೊದಲು ನಿಮ್ಮನ್ನು ಸಮನ್ಸ್ ಮಾಡಲಾಗುತ್ತದೆ’ ಎಂದು ಹೇಳಿದ್ದು. ಜೈಲು ಅಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ತಾಕೀತು ಮಾಡಿದ್ದು, ಯಾವುದೇ ಕಾರಣಕ್ಕೂ ಜೈಲಿನಲ್ಲಿ ಆರೋಪಿಗ:ಇಗೆ ರಾಜಾತಿಥ್ಯ ನೀಡಬಾರದು ಎಂದಿದೆ.
ರಾಜಾತಿಥ್ಯ ನೀಡಿರುವ ಬಗ್ಗೆ ನಾನು ಎಜಿ ಜೊತೆ ಮಾತನಾಡಿ ತಿಳಿಸುತ್ತೇನೆ ಎಂದು ರಾಜ್ಯ ಸರ್ಕಾರದ ಪರ ವಕೀಲ ಸಿದ್ಧಾರ್ಥ್ ಲೂತ್ರಾ ತಿಳಿಸಿದರು. ಈ ತೀರ್ಪಿನ ಪ್ರತಿಯನ್ನು ಎಲ್ಲಾ ಹೈಕೋರ್ಟ್‌ಗಳು ಮತ್ತು ರಾಜ್ಯ ಸರ್ಕಾರಗಳಿಗೆ ನೀಡುವಂತೆ ರಿಜಿಸ್ಟ್ರಿಗೆ ನಿರ್ದೇಶಿಸಲಾಗಿದೆ ಎಂದು ನ್ಯಾಯಮೂರ್ತಿಗಳು ತಿಳಿಸಿದ್ದಾರೆ.
Independence day: ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಮೂರು ದಿವಸ ರಾಜಭವನ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ!
