Home » Human-Animal: ಅರಣ್ಯ ಇಲಾಖೆಯಲ್ಲಿ 310 ವೀಕ್ಷಕರು; 540 ರಕ್ಷಕರ ನೇಮಕಾತಿ : ವನ್ಯಜೀವಿ-ಮಾನವ ಸಂಘರ್ಷ ನಿಯಂತ್ರಣಕ್ಕೆ ಕ್ರಮ – ಅರಣ್ಯ ಸಚಿವ ಖಂಡ್ರೆ

Human-Animal: ಅರಣ್ಯ ಇಲಾಖೆಯಲ್ಲಿ 310 ವೀಕ್ಷಕರು; 540 ರಕ್ಷಕರ ನೇಮಕಾತಿ : ವನ್ಯಜೀವಿ-ಮಾನವ ಸಂಘರ್ಷ ನಿಯಂತ್ರಣಕ್ಕೆ ಕ್ರಮ – ಅರಣ್ಯ ಸಚಿವ ಖಂಡ್ರೆ

0 comments

Human-Animal: ಅರಣ್ಯ ಇಲಾಖೆಯಲ್ಲಿ ಮುಂಚೂಣಿ ಸಿಬ್ಬಂದಿ ಕೊರತೆ ನೀಗಿಸಲು 310 ಅರಣ್ಯ ವೀಕ್ಷಕರ ನೇಮಕವಾಗಿದ್ದು, 540 ಅರಣ್ಯ ರಕ್ಷಕರ (ಗಾರ್ಡ್) ನೇಮಕಾತಿ ಪ್ರಗತಿಯಲ್ಲಿದೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ವಿಧಾನಪರಿಷತ್ತಿನಲ್ಲಿಂದು ತಿಳಿಸಿದ್ದಾರೆ.

ಎಸ್.ಕೇಶವ ಪ್ರಸಾದ್ ಪ್ರಸ್ತಾವಕ್ಕೆ ಉತ್ತರಿಸಿದ ಸಚಿವರು, ಕಾಡಾನೆ, ಹುಲಿ ಸೇರಿದಂತೆ ವನ್ಯಜೀವಿ ದಾಳಿಯಿಂದ ಮೃತಪಟ್ಟವರಿಗೆ ಪ್ರಸ್ತುತ 20 ಲಕ್ಷ ರೂ. ಪರಿಹಾರ ನೀಡಲಾಗುತ್ತಿದೆ. ಹಾವು ಕಚ್ಚಿ ಮೃತಪಟ್ಟವರಿಗೆ ಕೃಷಿ ಇಲಾಖೆ 2 ಲಕ್ಷ ರೂ. ಪರಿಹಾರ ಒದಗಿಸುತ್ತಿದೆ ಎಂದರು.

ವನ್ಯಜೀವಿಗಳ ಸಂಖ್ಯೆ ಹೆಚ್ಚಳವಾಗಿದೆ. ಸರ್ಕಾರ ಮಾನವ-ವನ್ಯಜೀವಿ ಸಂಘರ್ಷ ನಿಯಂತ್ರಣಕ್ಕೆ ಕ್ರಮ ಕೈಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಪ್ರತ್ಯೇಕ ಆನೆ ಕಾರ್ಯಪಡೆ ಮಂಜೂರಿಗೆ ಸೂಚಿಸಲಾಗಿದೆ 2-3 ದಿನಗಳಲ್ಲಿ ಅಧಿಕೃತ ಪ್ರಕಟಣೆ ಹೊರಡಿಸಲಾಗುವುದು.

ಪಡೆಯಲ್ಲಿ 32 ಸಿಬ್ಬಂದಿ ಇರಲಿದ್ದು, ಆನೆಗಳನ್ನು ಕಾಡಿಗೆ ಓಡಿಸುವ ಜೊತೆಗೆ ಪುಂಡಾನೆ ಸೆರೆ ಕಾರ್ಯಾಚರಣೆಯಲ್ಲೂ ಸಹಕರಿಸಲಿದ್ದಾರೆ. ಆನೆಪಥ (ಕಾರಿಡಾರ್) ಮತ್ತು ಆವಾಸಸ್ಥಾನ ಸಂರಕ್ಷಣೆ ಅಧ್ಯ ಯನಕ್ಕೆ ಭಾರತೀಯ ವಿಜ್ಞಾನ ಮಂದಿರ (ಐಐಎಸ್‌ಸಿ) ಜೊತೆ ಒಪ್ಪಂದ ಮಾಡಿಕೊಳ್ಳಲಾಗಿದೆ, ಪ್ರೊ.ಆರ್.ಸುಕುಮಾರ್ ತಂಡ ಅಧ್ಯಯನ ಆರಂಭಿಸಿದೆ.

ಮಲೆಮಹದೇಶ್ವರ ಬೆಟ್ಟದ ವನ್ಯಜೀವಿ ಧಾಮದಲ್ಲಿ ತಾಯಿ ಹುಲಿ ಮತ್ತು ನಾಲ್ಕು ಮರಿ ಹುಲಿಗಳು ವಿಷಪ್ರಾಶನದಿಂದ ಮೃತಪಟ್ಟಿದ್ದು ಅತ್ಯಂತ ನೋವಿನ ಸಂಗತಿ. ಈಗಾಗಲೇ ತಪ್ಪಿತಸ್ಥರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯಿದೆಯಡಿ ಕ್ರಮ ಕೈಗೊಳ್ಳಲಾಗಿದೆ. ಆನೆ-ಮಾನವ ಸಂಘರ್ಷ ನಿಯಂತ್ರಿಸಲು ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ ಸರ್ಕಾರ ಆದ್ಯತೆ ನೀಡಿದೆ. ರಾಮನಗರ ಜಿಲ್ಲೆ ಜನರ ಸಮಸ್ಯೆಗೆ ಸರ್ಕಾರ ಸ್ಪಂದಿಸಲಿದೆ.

ಆನೆ ಶಿಬಿರ ನಿರ್ಮಾಣಕ್ಕೆ ಹಲವು ಭಾಗಗಳಿಂದ ಬೇಡಿಕೆ ಇದ್ದು ಪರಿಶೀಲಿಸಲಾಗುವುದು. ಮಂಗಗಳ ಹಾವಳಿಯಿಂದ ಬೆಳೆಗಳ ಹಾನಿ ಸರ್ಕಾರದ ಗಮನಕ್ಕೆ ಬಂದಿದೆ. ಮಂಗಗಳನ್ನು ಹಿಡಿಯಲು ಸೂಚನೆ ನೀಡುವುದಾಗಿ ತಿಳಿಸಿದರು.

Actor Ramya: ನಟಿ ರಮ್ಯಾಗೆ ಅಶ್ಲೀಲ ಸಂದೇಶ ಪ್ರಕರಣ: ಉಡುಪಿ ಮೂಲದ ಇಬ್ಬರು ಪೊಲೀಸರ ವಶ!

You may also like