Home » Karnataka Assembly: ಬಾಲ್ಯ ವಿವಾಹ ನಿಷೇಧ ತಿದ್ದುಪಡಿ ಕಾಯ್ದೆ’ ಅಂಗೀಕಾರ – ಇನ್ಮುಂದೆ ಮದುವೆ ಅಲ್ಲ, ನಿಶ್ಚಿತಾರ್ಥ ಮಾಡಿದ್ರೂ ಶಿಕ್ಷೆ ಕಟ್ಟಿಟ್ಟ ಬುತ್ತಿ

Karnataka Assembly: ಬಾಲ್ಯ ವಿವಾಹ ನಿಷೇಧ ತಿದ್ದುಪಡಿ ಕಾಯ್ದೆ’ ಅಂಗೀಕಾರ – ಇನ್ಮುಂದೆ ಮದುವೆ ಅಲ್ಲ, ನಿಶ್ಚಿತಾರ್ಥ ಮಾಡಿದ್ರೂ ಶಿಕ್ಷೆ ಕಟ್ಟಿಟ್ಟ ಬುತ್ತಿ

0 comments

Karnataka Assembly : ರಾಜ್ಯದಲ್ಲಿ ಇನ್ನು ಮುಂದೆ ಅಪ್ರಾಪ್ತ ವಯಸ್ಸಿನವರಿಗೆ ನಿಶ್ಚಿತಾರ್ಥ ಮಾಡಿದರೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ಈ ಕುರಿತಾಗಿ ಬಾಲ್ಯ ವಿವಾಹ ನಿಷೇಧ ಕಾಯ್ದೆಗೆ ತಿದ್ದುಪಡಿಯನ್ನು ತರಲಾಗಿದೆ.

ಹೌದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ಸೋಮವಾರ ವಿಧಾನಸಭೆಯಲ್ಲಿ ಬಾಲ್ಯ ವಿವಾಹ ನಿಷೇಧ (ತಿದ್ದುಪಡಿ) ವಿಧೇಯಕವನ್ನು ಮಂಡಿಸಿದ್ದು, ಸದನ ಅಂಗೀಕಾರ ಮಾಡಿತು.

ಈ ವಿಧೇಯಕದ ಪ್ರಕಾರ, ಬಾಲ್ಯ ವಿವಾಹವನ್ನು ತಡೆಯುವ ನಿಟ್ಟಿನಲ್ಲಿ ಕಠಿಣ ಕ್ರಮಗಳನ್ನು ಜಾರಿಗೊಳಿಸಲಾಗಿದೆ. ಹೊಸ ತಿದ್ದುಪಡಿಯ ನಿಯಮದಂತೆ, ಅಪ್ರಾಪ್ತ ವಯಸ್ಸಿನವರಿಗೆ ನಿಶ್ಚಿತಾರ್ಥ ಮಾಡಿದರೂ ಕಾನೂನು ಕ್ರಮ ಜರುಗಿಸಲಾಗುವುದು. ಒಂದು ವೇಳೆ ಬಾಲ್ಯ ವಿವಾಹ ಪ್ರಕರಣಗಳು ಪತ್ತೆಯಾದರೆ, ಒಂದು ಲಕ್ಷ ರೂಪಾಯಿ ದಂಡ ಹಾಗೂ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಸಚಿವೆ ಹೆಬ್ಬಾಳಕರ್ ಹೇಳಿದರು

UP: ಯೋಧನಿಗೆ ಟೋಲ್ ಸಿಬ್ಬಂದಿಯಿಂದ ಪ್ರಕರಣ – ಕಂಪೆನಿಗೆ 20 ಲಕ್ಷ ರೂ. ದಂಡ ವಿಧಿಸಿ, ನಿಷೇಧ ಹೇರಿದ ಹೆದ್ದಾರಿ ಪ್ರಾಧಿಕಾರ!!

You may also like