Udupi: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ವಿರುದ್ಧ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರು ಅವಾಚ್ಯ ಶಬ್ದಗಳನ್ನು ಬಳಸಿ ವಾಗ್ದಾಳಿ ನಡೆಸಿದ ಕಾರಣ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಆಗಸ್ಟ್ 16 ರಂದು ಫೇಸ್‌ಬುಕ್ ಪೇಜ್‌ನಲ್ಲಿ ಮಹೇಶ ಶೆಟ್ಟಿ ತಿಮರೋಡಿಯು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್‌ರವರ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ತೇಜೋವಧೆ ಮಾಡಿ ಹಿಂಧೂ ಧರ್ಮದ ನಾಯಕನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರ ವಿರುದ್ಧ ಗಂಭೀರ ಪ್ರಕರಣ ದಾಖಲಾಗಿದೆ.
ಉಡುಪಿ ಗ್ರಾಮಾಂತರ ಬಿಜಿಪಿಯ ಮಂಡಲಾಧ್ಯಕ್ಷ ರಾಜೀವ ಕುಲಾಲ್ ದೂರು ನೀಡಿದ್ದಾರೆ. ಅವರು ಬ್ರಹ್ಮಾವರ ಠಾಣೆಗೆ ದೂರು ನೀಡಿದ್ದು, ಆ ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ US 196(1), 352, 353(2), BNS ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
Manipal : ವಿಷ ಸೇವಿಸಿ ಹೊಟೇಲ್ ಉದ್ಯಮಿ ಬೈಲೂರಿನ ಕೃಷ್ಣರಾಜ ಹೆಗ್ಡೆ ಆತ್ಮಹತ್ಯೆ !!
