Home » Kodagu Rain: ಮಡಿಕೇರಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ – ಇನ್ನೂ 10-12 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ

Kodagu Rain: ಮಡಿಕೇರಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ – ಇನ್ನೂ 10-12 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ

0 comments

Kodagu rain: ಕೊಡಗಿನ ಅಂಗನವಾಡಿ, ಶಾಲೆ ಹಾಗೂ ಕಾಲೇಜು ವ್ಯಾಪ್ತಿಯಲ್ಲಿ ಅಪಾಯದಲ್ಲಿರುವ ಮರಗಳನ್ನು ತೆರವುಗೊಳಿಸಲು ಅಗತ್ಯ ಕ್ರಮವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಡಿಕೇರಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ.

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ವಿಡಿಯೊ ಸಂವಾದ ಮೂಲಕ ಮಾತನಾಡಿದ ಜಿಲ್ಲಾಧಿಕಾರಿ ಅವರು ಜಿಲ್ಲೆಯಲ್ಲಿ ಇನ್ನೂ 10-12 ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ಬಿರುಗಾಳಿ ಸಹ ಇರಲಿದೆ. ಆದ್ದರಿಂದ ಈ ಬಗ್ಗೆ ಹೆಚ್ಚಿನ ಗಮನಹರಿಸುವಂತೆ ನಿರ್ದೇಶನ ನೀಡಿದರು.

ಹಳೆ ಮರಗಳನ್ನು ತೆರವುಗೊಳಿಸಲು ಜಿ.ಪಂ.ಸಿಇಒ ಅವರ ಮೂಲಕ ಅರಣ್ಯ ಇಲಾಖೆಗೆ ಪತ್ರ ನೀಡಿ ಸೂಕ್ತ ಕ್ರಮ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ಸೂಚಿಸಿದರು.

ಕೊಡಗು ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಿಂದಾಗಿ ರಸ್ತೆಗಳು ಗುಂಡಿಮಯವಾಗಿದ್ದು, ಮಳೆ ಮುಗಿದ ನಂತರ ರಾಜ್ಯ, ಜಿಲ್ಲಾ ಹಾಗೂ ಗ್ರಾಮೀಣ ವ್ಯಾಪ್ತಿಯ ರಸ್ತೆಗಳ ಗುಂಡಿ ಮುಚ್ಚುವ ಕಾರ್ಯವಾಗಬೇಕಿದೆ. ಆ ನಿಟ್ಟಿನಲ್ಲಿ ಎಂಜಿನಿಯರ್‍ಗಳು ಅಗತ್ಯ ಕ್ರಮವಹಿಸುವಂತೆ ಸೂಚಿಸಿದರು.

ನಗರ, ಪಟ್ಟಣ ಪ್ರದೇಶದಲ್ಲಿಯೂ ರಸ್ತೆಗಳು ಗುಂಡಿ ಬಿದ್ದಿದೆ. ಇದನ್ನು ಸರಿಪಡಿಸಬೇಕು. ಹಾಗೆಯೇ ವಿದ್ಯುತ್ ಮಾರ್ಗಗಳ ಸಮರ್ಪಕ ನಿರ್ವಹಣೆ ಮತ್ತಿತರ ಬಗ್ಗೆ ಗಮನಹರಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ನಿರ್ದೇಶನ ನೀಡಿದರು.

ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು, ವಿವಿಧ ಇಲಾಖೆ ಎಂಜಿನಿಯರ್ ಗಳು ಇತರರು ವಿಡಿಯೋ ಸಂವಾದದಲ್ಲಿ ಪಾಲ್ಗೊಂಡು ಮಾಹಿತಿ ನೀಡಿದರು.Pratap Simha : ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುತ್ತೇನೆ, ಆದ್ರೆ ಆ ಒಂದು ಕ್ಷೇತ್ರ ಬಿಟ್ಟು – ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿಕೆ

You may also like