4
School: ಶಾಲೆಗಳಲ್ಲಿ ಮುಖ ಗುರುತಿಸುವಿಕೆ ವ್ಯವಸ್ಥೆಗಳನ್ನು ಜಾರಿಗೆ ತರುವ ಯೋಜನೆಯನ್ನು ಕೈಬಿಡಬೇಕು ಎಂದು ಶಿಕ್ಷಣ ತಜ್ಞರು, ಶಿಕ್ಷಕರ ಸಂಘಗಳು, ಪೋಷಕರ ಗುಂಪುಗಳು, ನಾಗರಿಕ ಸಮಾಜ ಸಂಘಟನೆಗಳ ಒಕ್ಕೂಟ ರಾಜ್ಯ ಸರ್ಕಾರವನ್ನು ಒತ್ತಾಯಿಸಿವೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ 2025-26 ನೇ ಸಾಲಿನಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳ, ಟ್ರ್ಯಾಕಿಂಗ್ ವ್ಯವಸ್ಥೆಗೆ ಲಿಂಕ್ ಮಾಡಲಾದ ಮೊಬೈಲ್ ಆಧಾರಿತ Al ಫೇಸ್ ರೆಕಗ್ನಿಷನ್ ವ್ಯವಸ್ಥೆಯನ್ನು ಜಾರಿ ಮಾಡಬೇಕು ಎಂದು ಘೋಷಿಸಿದೆ. ಆದರೆ ಇದು ದುರುಪಯೋಗವಾಗುವ ಸಾಧ್ಯತೆ ಇದ್ದು, ಆದ್ದರಿಂದ ಇದನ್ನು ಕೈ ಬಿಡುವಂತೆ ಒತ್ತಾಯಿಸಲಾಗಿದೆ.
