Home » Banu Mushtaq: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಆಯ್ಕೆ ವಿರೋಧ: ಮತ್ತೆರಡು ಪಿಐಎಲ್‌ ಸಲ್ಲಿಕೆ

Banu Mushtaq: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಆಯ್ಕೆ ವಿರೋಧ: ಮತ್ತೆರಡು ಪಿಐಎಲ್‌ ಸಲ್ಲಿಕೆ

0 comments

Banu Mushtaq: ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್‌ ಆಯ್ಕೆಗೆ ವಿರೋಧ ವ್ಯಕ್ತ ಹೆಚ್ಚಾಗಿದ್ದು, ಈಗಾಗಲೇ ರಾಜ್ಯ ಸರಕಾರ ಕ್ರಮ ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್‌ ಸಿಂಹ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಇದರ ಬೆನ್ನಲ್ಲೇ ಕರ್ನಾಟಕ ಹೈಕೋರ್ಟ್‌ನಲ್ಲಿ ಮತ್ತೆರಡು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಸಲ್ಲಿಕೆಯಾಗಿದೆ.

ಹಿಂದೂ ಅಲ್ಲದ ಬಾನು ಮುಷ್ತಾಕ್‌ರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಿರುವ ನಿರ್ಧಾರ ವಾಪಸ್‌ ಪಡೆಯಬೇಕು, ಜೊತೆಗೆ ದಸರಾ ಉದ್ಘಾಟನೆಯು ಹಿಂದೂ ಧಾರ್ಮಿಕ ಸಂಪ್ರದಾಯದ ಅವಿಭಾಜ್ಯ ಭಾಗವೆಂದು ಘೋಷಿಸಿ ಅದನ್ನು ಹಿಂದೂ ಗಣ್ಯರಿಂದ ಉದ್ಘಾಟಿಸಬೇಕು ಎಂದು ಬೆಂಗಳೂರು ನಿವಾಸಿ ಎಚ್‌.ಎಸ್‌.ಗೌರವ್‌ ಕೋರಿದ್ದಾರೆ.

ಇದನ್ನೂ ಓದಿ:Bangalore: Bangalore: ವಿದೇಶಕ್ಕೆ ಅನ್ನಭಾಗ್ಯ ಅಕ್ಕಿ ಸಾಗಣೆ: GPS ಟ್ರ್ಯಕರ್‌, ಗೋದಾಮುಗಳಿಗೆ ಸಿಸಿಟಿವಿ ಅಳವಡಿಕೆ, ಸಿಎಂ ಸೂಚನೆ

ಬೆಂಗಳೂರಿನ ಉದ್ಯಮಿ ಟಿ.ಗಿರೀಶ್‌ ಕುಮಾರ್‌ ಹಾಗೂ ಅಭಿನವ ಭಾರತ್‌ ಪಾರ್ಟಿಯ ರಾಷ್ಟ್ರೀಯ ಉಪಾಧ್ಯಕ್ಷೆ ಆರ್.‌ ಸೌಮ್ಯ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಇವು ವಿಚಾರಣೆಗೆ ಬರಬೇಕಿದೆ.

ಒಟ್ಟಾರೆ, ಬಾನು ಮುಷ್ತಾಕ್‌ರ ಆಯ್ಕೆ ವಿರೋಧ ಮಾಡಿ ಕೋರ್ಟ್‌ಗೆ ಒಟ್ಟು 3 ಅರ್ಜಿಗಳು ಸಲ್ಲಿಕೆಯಾಗಿದೆ.

You may also like