Karanataka: ಪರಿಶಿಷ್ಟ ಪಂಗಡ (ಎಸ್‌ಟಿ) ಪಟ್ಟಿಗೆ ಕುರುಬ ಮತ್ತಿತರ ಕೆಲವು ಸಮುದಾಯಗಳನ್ನು ಸೇರಿಸಲು ರಾಜ್ಯ (Karanataka) ಸರ್ಕಾರ ಉದ್ದೇಶಿಸಿರುವುದನ್ನು ವಿರೋಧಿಸಿ ಸೆ.25ರಂದು ರಾಜ್ಯದ ನಗರಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಹೊಸಪೇಟೆ ತಾಲ್ಲೂಕು ವಾಲ್ಮೀಕಿ ನಾಯಕ ಸಮಾಜದ ಅಧ್ಯಕ್ಷ ಗೋಸಲ ಭರಮಪ್ಪ ಹೇಳಿದರು.
ಇಂದು ಸುದ್ದಿಗೋಷ್ಠಿ ನಡೆಸಿದ ವಾಲ್ಮೀಕಿ ನಾಯಕ ಸಮಾಜದ ಅಧ್ಯಕ್ಷ ಗೋಸಲ ಭರಮಪ್ಪ ಅವರು, ಅಕ್ಟೋಬರ್ 5ರೊಳಗೆ ಸರ್ಕಾರ ನಮ್ಮ ಬೇಡಿಕೆಗಳಿಗೆ ಸ್ಪಂದಿಸಿ ನಿರ್ಧಾರ ಪ್ರಕಟಿಸಬೇಕು, ತಪ್ಪಿದಲ್ಲಿ ಅ.7ರಂದು ನಡೆಯಲಿರುವ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೇ, ಬೇಡವೇ ಎಂಬುದನ್ನು ನಿರ್ಧರಿಸಲಾಗುವುದು ಎಂದರು.
‘ಪರಿಶಿಷ್ಟ ಪಂಗಡಕ್ಕೆ ಕುರುಬ ಮತ್ತು ಇತರೆ ಸಮುದಾಯಗಳನ್ನು ಸೇರ್ಪಡೆಗೊಳಿಸುವ ಯೋಜನೆಯನ್ನು ತಕ್ಷಣ ನಿಲ್ಲಿಸಬೇಕು, ಈಗಾಗಲೇ ಸುಳ್ಳು ಜಾತಿ ಪ್ರಮಾಣಪತ್ರ ಪಡೆದು ಎಸ್‌ಟಿ ಫಲಾನುಭವಿಗಳಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ಆದೇಶ ನೀಡಬೇಕು ಎಂಬುದು ನಮ್ಮ ಸಮುದಾಯದ ಪ್ರಮುಖ ಬೇಡಿಕೆ’ ಎಂದು ತಿಳಿಸಿದ್ದಾರೆ.
