Home » Madhu Bangarappa: ಜಾತಿ ಗಣತಿ ಕಾರ್ಯದಲ್ಲಿ ಪಾಲ್ಗೊಳ್ಳುವ ಶಿಕ್ಷಕರಿಗೆ ಸಿಹಿ ಸುದ್ದಿ

Madhu Bangarappa: ಜಾತಿ ಗಣತಿ ಕಾರ್ಯದಲ್ಲಿ ಪಾಲ್ಗೊಳ್ಳುವ ಶಿಕ್ಷಕರಿಗೆ ಸಿಹಿ ಸುದ್ದಿ

0 comments
Madhu bangarappa

Madhu Bangarappa: ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಶಾಲಾ ಶಿಕ್ಷಣ ಸಚಿವ ಎಸ್‌.ಮಧು ಬಂಗಾರಪ್ಪ ಅವರು, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಜಾತಿ ಗಣತಿಯಲ್ಲಿ ಭಾಗವಹಿಸುವ ಶಿಕ್ಷಕರಿಗೆ ಕಡಿತವಾಗುವ ದಸರಾ ರಜೆ ದಿನಗಳನ್ನು ಪರ್ಯಾಯ ರೀತಿಯಲ್ಲಿ ಒದಗಿಸುವ ಕುರಿತು ಚಿಂತನೆ ನಡೆಸುವುದಾಗಿ ಹೇಳಿದ್ದಾರೆ.

ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ದಸರಾ ರಜಾ ಅವಧಿಯಲ್ಲಿ ಸಮೀಕ್ಷೆ ಕಾರ್ಯ ಕೈಗೊಳ್ಳುವುದು ಅನಿರ್ವಾಯವಾಗಿದೆ. ಶಾಲಾ ಅವಧಿಯಲ್ಲಿ ಶಿಕ್ಷಕರನ್ನು ಸಮೀಕ್ಷೆ ಕಾರ್ಯಕ್ಕೆ ಬಳಸಿಕೊಳ್ಳಲು ಆಗುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ;Mysore Dasara: ದಸರಾ ಉದ್ಘಾಟನೆ: ಬಾನು ಮುಷ್ತಾಕ್‌ಗೆ ಬಿಗಿ ಭದ್ರತೆ

ಸರಕಾರದ ಆದೇಶದಂತೆ ಅ.7 ರವರೆಗೆ ಶಿಕ್ಷಕರು ಸಮೀಕ್ಷೆ ಕಾರ್ಯ ಮಾಡಲಿದ್ದಾರೆ. ಸರಕಾರ ವಿಶೇಷ ಸಂಭಾವನೆಯನ್ನು ಸಮೀಕ್ಷೆ ಕಾರ್ಯಕ್ಕೆ ನೀಡಲಿದೆ. ಸಮೀಕ್ಷೆಯಲ್ಲಿ ಭಾಗವಹಿಸುವ ಶಿಕ್ಷಕರಿಗೆ ಕಡಿತವಾಗುವ ರಜೆ ದಿನಗಳನ್ನು ಬೇರೆಯ ದಿನಗಳಲ್ಲಿ ಪರ್ಯಾಯವಾಗಿ ಕೊಡಲು ಸಾಧ್ಯವಿದೆಯೇ ಎನ್ನುವ ಕುರಿತು ಪರಿಶೀಲನೆ ಮಾಡಲಾಗುತ್ತದೆ. ಅಂತಹ ಚಿಂತನೆ ರಾಜ್ಯ ಸರಕಾರದ ಮುಂದಿದೆ ಎಂದು ಸಚಿವರು ತಿಳಿಸಿದರು.

You may also like