Home » Mysore Dasara: ದಸರಾ ಉದ್ಘಾಟನೆ: ಬಾನು ಮುಷ್ತಾಕ್‌ಗೆ ಬಿಗಿ ಭದ್ರತೆ

Mysore Dasara: ದಸರಾ ಉದ್ಘಾಟನೆ: ಬಾನು ಮುಷ್ತಾಕ್‌ಗೆ ಬಿಗಿ ಭದ್ರತೆ

0 comments

Dasara: ನಾಡಹಬ್ಬ ದಸರಾ ಉದ್ಘಾಟನೆ ಮಾಡಲಿರುವ ಬಾನು ಮುಷ್ತಾಕ್‌ ಅವರಿಗೆ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ನೀಡಿದ್ದು, ಸರಕಾರ ಬಿಗಿ ಭದ್ರತೆ ನೀಡಿದೆ.

3 ಕೆಎಸ್‌ಆರ್‌ಪಿ ತುಕಡಿಯನ್ನು ನಿಯೋಜನೆ ಮಾಡಿದ್ದು, ಬೆಳಗ್ಗೆ 9.30 ಕ್ಕೆ ಹೋಟೆಲಿನಿಂದ ಬಾನು ಮುಷ್ತಾಕ್‌ ಪೊಲೀಸ್‌ ಎಸ್ಕಾರ್ಟ್‌ ಮೂಲಕ ಚಾಮುಂಡಿ ಬೆಟ್ಟಕ್ಕೆ ತೆರಳಲಿದ್ದಾರೆ.

ಹಿಂದೂ ಸಂಘಟನೆಗಳು, ಬಿಜೆಪಿ ನಾಯಕರು ಬಾನು ಮುಷ್ತಾಕ್‌ ಆಯ್ಕೆಯನ್ನು ವಿರೋಧ ಮಾಡಿದ್ದರು. ಹಾಗಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಮುಂಜಾಗ್ರತಾ ಕ್ರಮವಾಗಿ ಪೊಲೀಸರಿಂದ ಭಾರೀ ಭದ್ರತೆ ನೀಡಲಾಗಿದೆ.

ಮಹಿಷಾಸುರ ಮೂರ್ತಿಯಿಂದ ದೇವಾಲಯದವರೆಗೆ ಸಾಂಪ್ರದಾಯಿಕ ಸ್ವಾಗತ ನೀಡಲಾಗುತ್ತದೆ. ರಸ್ತೆ ಉದ್ದಕ್ಕೂ ರಂಗೋಲಿ ಬಿಡಿಸಿ, ಬಾಳೆ ಕಂಬ ಕಟ್ಟಿ ಸ್ವಾಗತ ರೆಡಿಯಾಗಿದೆ. ಮೂರು ಕಡೆ ಚೆಕ್ಕಿಂಗ್‌ ಪಾಯಿಂಟ್‌ ಇದ್ದು, ಪ್ರತಿಯೊಬ್ಬರನ್ನೂ ಪರಿಶೀಲನೆ ಮಾಡಿದ ಬಳಿಕ ಬೆಟ್ಟಕ್ಕೆ ಪ್ರವೇಶ ಕಲ್ಪಿಸಲಾಗುತ್ತದೆ.

ಉದ್ಘಾಟನೆಗೂ ಮೊದಲು ಸಿಎಂ ಸಿದ್ದರಾಮಯ್ಯ, ಉದ್ಘಾಟಕರಾದ ಬಾನು ಮುಷ್ತಾಕ್‌ ಸೇರಿ ಗಣ್ಯರಿಗೆ ಮಹಿಷಾ ಮೂರ್ತಿ ಬಳಿ ಜಿಲ್ಲಾಡಳಿತ ಸ್ವಾಗತ ನೀಡಲಿದೆ. ಅಲ್ಲಿಂದ ತೆರದ ವಾಹನ ಅಥವಾ ಕಾಲ್ನಡಿಗೆ ಮೂಲಕ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಗಣ್ಯರು ತೆರಳಲಿದ್ದಾರೆ. ದೇವರ ದರ್ಶನ ನಂತರ ವೇದಿಕೆ ಕಾರ್ಯಕ್ರಮ ಜರುಗಲಿದೆ.

ಬೆಳಿಗ್ಗೆ 10.10 ರಿಂದ 10.40 ರ ವೃಶ್ಚಿಕ ಶುಭ ಲಗ್ನದಲ್ಲಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಲೇಖಕಿ ಬಾನು ಮುಷ್ತಾಕ್‌ ಪುಷ್ಪಾರ್ಚನೆ ಮಾಡಿ ದಸರಾ ಉದ್ಘಾಟನೆ ಮಾಡಲಿದ್ದಾರೆ.

You may also like